BREAKING : ಅವಾಚ್ಯ ಪದ ಬಳಕೆ ಕೇಸ್ : ವಿಚಾರಣೆಗೆ ಹಾಜರಾಗುವಂತೆ MLC ಸಿ.ಟಿ ರವಿಗೆ ‘CID’ ನೋಟಿಸ್.!

ಬೆಂಗಳೂರು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಎಮ್ ಎಲ್ ಸಿ ಸಿಟಿ ರವಿಗೆ ಸಿಐಡಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ವೇಳೆ ಡಿ.19ರಂದು ವಿಧಾನಪರಿಷತ್ ಕಲಾಪದ ಸಂದರ್ಭದಲ್ಲಿ ಎಂಎಲ್ ಸಿ ಸಿ.ಟಿ.ರವಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದರು. ಪ್ರಕರಣ ಸಂಬಂಧ ಸಿ.ಟಿ.ರವಿ ಬಂಧನವಾಗಿತ್ತು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿತ್ತು. ಈ ನಡುವೆ ರಾಜ್ಯ ಬಿಜೆಪಿ ನಾಯಕರು ರಾಜ್ಯಪಾಲರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಅಶ್ಲೀಲ ಪದ ಬಳಕೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ರಾಜ್ಯಪಾಲರನ್ನು ಭೇಟಿಯಾಗಿದ್ದರು.ಬಳಿಕ ರಾಜ್ಯಪಾಲರು ಈ ಬಗ್ಗೆ ಕ್ರಮ ವಹಿಸುವಂತೆ ಸಿಎಂ ಸಿದ್ದರಾಮಯ್ಯಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬೆನ್ನಲ್ಲೇ ಸಿಐಡಿ ಅಧಿಕಾರಿಗಳು ಸಿಟಿ ರವಿಗೆ ನೋಟಿಸ್ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read