HomeLive NewsBREAKING: ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಿಬಿಐ ಅರ್ಜಿ: ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ನೋಟಿಸ್

BREAKING: ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಸಿಬಿಐ ಅರ್ಜಿ: ಮಾಜಿ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಮಾಜಿ ಸಚಿವ ಬಿ. ನಾಗೇಂದ್ರ ಅವರಿಗೆ ನಿರೀಕ್ಷಣಾ ಜಾಮೀನು ನೀಡಿರುವುದನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ.

ನಿಗಮದ ಹಣವನ್ನು ಮುಂಬೈನ ಇಬ್ಬರು ಮಹಿಳೆಯರಿಗೆ ವರ್ಗಾವಣೆ ಮಾಡಲಾಗಿದೆ. ನಿಗಮದ ಅಕ್ರಮಗಳ ಬಗ್ಗೆ ಸಿಬಿಐ ಹೆಚ್ಚಿನ ತನಿಖೆ ನಡೆಸುತ್ತಿದೆ. ಬಿ. ನಾಗೇಂದ್ರ ಬಂಧಿಸಿ ವಿಚಾರಣೆಗೆ ಒಳಪಡಿಸುವ ಅಗತ್ಯವಿದೆ ಎಂದು ಸಿಬಿಐ ಪರ ಎಸ್.ಪಿ.ಪಿ. ಪ್ರಸನ್ನ ಕುಮಾರ್ ವಾದ ಮಂಡಿಸಿದ್ದಾರೆ.

ಅರ್ಜಿ ಸಂಬಂಧ ಮಾಜಿ ಸಚಿವ ನಾಗೇಂದ್ರಗೆ ನೋಟಿಸ್ ನೀಡಿ ವಿಚಾರಣೆಯನ್ನು ಜನವರಿ 29ಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ಮುಂದೂಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular