BREAKING : ಮಂಗಳೂರಿನಲ್ಲಿ ‘CCB’ ಪೊಲೀಸರ ಭರ್ಜರಿ ಕಾರ್ಯಾಚರಣೆ ; 6 ಕೋಟಿ ರೂ. ಮೌಲ್ಯದ MDMA ಡ್ರಗ್ಸ್ ಜಪ್ತಿ..!

ಮಂಗಳೂರು : ಮಂಗಳೂರಿನಲ್ಲಿ ಸಿಸಿಬಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಕೋಟ್ಯಾಂತರ ಮೌಲ್ಯದ ಡ್ರಗ್ಸ್ ಪತ್ತೆ ಮಾಡಿದ್ದಾರೆ.

ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ವಿದೇಶಿ ಪ್ರಜೆಯನ್ನು ಬಂಧಿಸಿ ಆತನಿಂದ 6 ಕೋಟಿ ರೂ. ಮೌಲ್ಯದ 6.300 ಕೆಜಿ ಎಂಡಿಎಂಎ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನೈಜೀರಿಯಾ ಪ್ರಜೆ ಪೀಟರ್ ಇಕೆಡಿ ಬೆಲೆನ್ವೊ ಬಂಧಿತ ಆರೋಪಿಯಾಗಿದ್ದು, ಈತ ಬೆಂಗಳೂರಿನಲ್ಲಿ ವಾಸವಾಗಿದ್ದನು.

ಈತ ಮಂಗಳೂರು ನಗರಕ್ಕೆ ಹಾಗೂ ಇತರ ರಾಜ್ಯಗಳಿಗೆ ಎಂಡಿಎಂಎ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದನು. ಈತನಿಂದ 6 ಕೋಟಿ ಮೌಲ್ಯದ 6.300 ಕೆಜಿ ಎಂಡಿಎಂಎ ವಶಪಡಿಸಿಕೊಳ್ಳಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಮಾ ತಿಳಿಸಿದ್ದಾರೆ.

ಆರೋಪಿ ಮನೆಯಿಂದ ಒಟ್ಟು 6 ಕೋಟಿ ಮೌಲ್ಯದ 6.310 ಕೆಜಿ ಎಂಡಿಎಂಎ, 3 ಮೊಬೈಲ್ ಫೋನ, ಡಿಜಿಟಲ್ ತೂಕ ಮಾಪಕ, , 17 ಇನ್ ಅಕ್ಟಿವ್ ಸಿಮ್ ಕಾರ್ಡ್ಗಳು, 10 ವಿವಿಧ ಬ್ಯಾಂಕ್ ಬ್ಯಾಂಕ್ ಖಾತೆ ಪುಸ್ತಕಗಳನ್ನು ವಶಪಡಿಸಿಕೊಳ್ಳಲಾಗಿದೆ.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read