ಬೆಂಗಳೂರು: ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.
ವೇಶ್ಯಾವಾಟಿಕೆ ನಡೆಸುತ್ತಿದ್ದ ಅನುಮಾನದ ಮೇಲೆ ಬೆಂಗಳೂರಿನ ರಿಚ್ಮಂಡ್ ಟೌನ್ ನಲ್ಲಿರುವ ಪಿಕ್ಸೀಸ್ ಸ್ಪಾ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಸಿಸಿಬಿ ದಾಳಿಯ ವೇಳೆ ಬಾಂಗ್ಲಾದೇಶ ಮೂಲದ ಯುವತಿ ಪತ್ತೆಯಾಗಿದ್ದಾರೆ.
ಬಾಂಗ್ಲಾದೇಶದ ಜಯಶೋರ್ ಜಿಲ್ಲೆಯ ಕುಲ್ನಾ ಪ್ರದೇಶದ ಯುವತಿ ಪತ್ತೆಯಾಗಿದ್ದಾರೆ. ಆಕೆಯನ್ನು ರಕ್ಷಿಸಲಾಗಿದೆ. ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ದಾಳಿ ನಡೆಸಿ ಪರಿಶೀಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.