HomeIndiaBREAKING: ಏರ್ ಇಂಡಿಯಾ ವಿಮಾನ ಅಪಘಾತ ಕುರಿತ ಇಟಲಿ ಪತ್ರಿಕೆ ವರದಿ ಬಗ್ಗೆ ಕೇಂದ್ರ ಸರ್ಕಾರ...

BREAKING: ಏರ್ ಇಂಡಿಯಾ ವಿಮಾನ ಅಪಘಾತ ಕುರಿತ ಇಟಲಿ ಪತ್ರಿಕೆ ವರದಿ ಬಗ್ಗೆ ಕೇಂದ್ರ ಸರ್ಕಾರ ಗರಂ

ನವದೆಹಲಿ: ಏರ್ ಇಂಡಿಯಾ ವಿಮಾನ AI-171 ಅಪಘಾತದ ಬಗ್ಗೆ ಉದ್ದೇಶಪೂರ್ವಕವಾಗಿ ಇಂಧನ ಸ್ವಿಚ್ ಮುಚ್ಚಿದ್ದಾರೆ ಎಂಬ ಇಟಾಲಿಯನ್ ವರದಿಯ ಬಗ್ಗೆ ಕೇಂದ್ರ ಸರ್ಕಾರ ಗರಂ ಆಗಿದೆ.

ಏರ್ ಇಂಡಿಯಾ ವಿಮಾನ ಅಪಘಾತದ ಬಗ್ಗೆ ಇಟಲಿ ಪತ್ರಿಕೆ ವರದಿ ನೀಡಿದ ಹಿನ್ನೆಲೆಯಲ್ಲಿ ಇಟಲಿ ಪತ್ರಿಕೆಯ ವರದಿಗೆ ಕೇಂದ್ರ ಸರ್ಕಾರ ಗರಂ ಆಗಿದೆ. ವಿಮಾನ ಅಪಘಾತಕ್ಕೆ ಪೈಲಟ್ ಕಾರಣ ಎನ್ನುವ ಪತ್ರಿಕೆಯ ವರದಿ ಆಧಾರ ರಹಿತವಾಗಿದೆ ಎಂದು ತಿಳಿಸಿದೆ. ದೃಢೀಕರಿಸದ ವರದಿಗಳಿಂದ ಸಾರ್ವಜನಿಕರಲ್ಲಿ ಅನಗತ್ಯ ಆತಂಕ ಸೃಷ್ಟಿಯಾಗುತ್ತದೆ. ತನಿಖೆ ಪ್ರಗತಿಯಲ್ಲಿರುವಾಗ ತಪ್ಪು ಮಾಹಿತಿ ನೀಡದಂತೆ ನಾಗರಿಕ ವಿಮಾನಯಾನ ಸಚಿವಾಲಯ ಕಿಡಿಕಾರಿದೆ.

ಅಧಿಕೃತ ತನಿಖಾ ವರದಿ ಬರುವ ಮೊದಲು ತೀರ್ಮಾನಕ್ಕೆ ಬರುವುದು ಸರಿಯಲ್ಲ ಎಂದು ಹೇಳಲಾಗಿದೆ. ಅಪೂರ್ಣ ಮಾಹಿತಿಯನ್ನು ಆಧರಿಸಿದ ವರದಿಗಾರಿಕೆಯ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ. ಮಾಧ್ಯಮಗಳು ಜವಾಬ್ದಾರಿಯುತವಾಗಿ ವರ್ತಿಸುವಂತೆ ಸಚಿವಾಲಯ ಸೂಚನೆ ನೀಡಿದೆ. ವಿದೇಶಿ ವರದಿಗಳಲ್ಲಿನ ಸತ್ಯಾಸತ್ಯತೆ ಪರಿಶೀಲಿಸದೆ ಹಂಚಿಕೊಳ್ಳಬೇಡಿ ಎಂದು ಹೇಳಿದ್ದು, ಸಾರ್ವಜನಿಕರು ಕೇವಲ ಅಧಿಕೃತ ಮೂಲಗಳ ಮಾಹಿತಿಯನ್ನು ಅಷ್ಟೇ ನಂಬಲು ಮನವಿ ಮಾಡಲಾಗಿದೆ. ತನಿಖಾ ದತ್ತಾಂಶ ಆಧರಿಸದ ಮಾಹಿತಿಯನ್ನು ನಂಬಬೇಡಿ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಂತರರಾಷ್ಟ್ರೀಯ ವರದಿ ಸತ್ಯಾಸತ್ಯತೆ ಬಗ್ಗೆ ತನಿಖೆಯನ್ನು ತಜ್ಞರು ಮುಂದುವರೆಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏರ್ ಇಂಡಿಯಾ ವಿಮಾನ AI-171 ಅಪಘಾತದ ತನಿಖೆ ಪೂರ್ಣಗೊಂಡಿದೆ ಎಂಬ ಇಟಾಲಿಯನ್ ಮಾಧ್ಯಮ ವರದಿಗಳನ್ನು ವಿಮಾನ ಅಪಘಾತ ತನಿಖಾ ಬ್ಯೂರೋ(AAIB) ಗುರುವಾರ ತಿರಸ್ಕರಿಸಿದೆ, ಈ ಹೇಳಿಕೆಗಳು “ತಪ್ಪು ಮತ್ತು ಊಹಾಪೋಹ” ಎಂದು ಹೇಳಿದೆ. ಸ್ಪಷ್ಟೀಕರಣವನ್ನು ನೀಡುತ್ತಾ, ವಾಯುಯಾನ ಅಪಘಾತ ತನಿಖಾ ಸಂಸ್ಥೆಯು ತನಿಖೆ ಇನ್ನೂ ನಡೆಯುತ್ತಿದೆ ಮತ್ತು ಯಾವುದೇ ಅಂತಿಮ ತೀರ್ಮಾನಗಳಿಗೆ ಬಂದಿಲ್ಲ ಎಂದು ಹೇಳಿದೆ.

ಭಾರತದ ಅತ್ಯಂತ ಮಾರಕ ವಿಮಾನ ದುರಂತಗಳಲ್ಲಿ ಒಂದಾದ ಏರ್ ಇಂಡಿಯಾದ ಬೋಯಿಂಗ್ 787-8 ವಿಮಾನವು ಜೂನ್ 12, 2025 ರಂದು ಅಹಮದಾಬಾದ್‌ನಿಂದ ಹಾರಾಟ ಆರಂಭಿಸಿದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿ 241 ಪ್ರಯಾಣಿಕರು ಸೇರಿದಂತೆ 260 ಜನರು ಸಾವನ್ನಪ್ಪಿದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular