ಚಿಕ್ಕಮಗಳೂರು: ಸೆಂಟ್ರಲ್ ಇಂಟಲಿಜೆನ್ಸ್ ಸಿಬ್ಬಂದಿ ಮಧು(28) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನನ್ನ ಸಾವಿಗೆ ಅನಾರೋಗ್ಯ ಕಾರಣವೆಂದು ಅವರು ಡೆತ್ ನೋಟ್ ನಲ್ಲಿ ಬರೆದಿಟ್ಟಿದ್ದಾರೆ.
ಚಿಕ್ಕಮಗಳೂರು ತಾಲೂಕಿನ ಚಿಕ್ಕನಹಳ್ಳಿಯಲ್ಲಿರುವ ಮನೆಯಲ್ಲಿ ಮಧು ನೇಣಿಗೆ ಶರಣಾಗಿದ್ದಾರೆ. ಐಬಿ ವಿಭಾಗದಲ್ಲಿ ಮಧು ಕರ್ತವ್ಯ ನಿರ್ವಹಿಸುತ್ತಿದ್ದರು. ಇತ್ತೀಚೆಗೆ ಶಿವಮೊಗ್ಗದಿಂದ ಚಿಕ್ಕಮಗಳೂರಿಗೆ ವರ್ಗಾವಣೆಯಾಗಿದ್ದರು. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.