ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಹಿಂದೂ ಮನೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಯಾಸಿನ್ ಸೇರಿ ಆರು ಜನರನ್ನು ಬಂಧಿಸಲಾಗಿದೆ.
ಚಿಕ್ಕಮಗಳೂರಿನ ಬಸವನಹಳ್ಳಿ ಠಾಣೆ ಪೋಲೀಸರು ಕಾರ್ಯಾಚರಣೆ ನಡೆಸಿ ನಾಲ್ವರು ಅಪ್ರಾಪ್ತರು ಸೇರಿ ಆರು ಮಂದಿ ಬಂಧಿಸಿದ್ದಾರೆ. ರಾತ್ರಿ ಚಿಕ್ಕಮಗಳೂರಿನಲ್ಲಿ ಜಡ್ಜ್ ನಿವಾಸದಲ್ಲಿ ಆರೋಪಿಗಳನ್ನು ಹಾಜರುಪಡಿಸಲಾಗಿದೆ.
ಪೊಲೀಸರು ಆರು ಆರೋಪಿಗಳನ್ನು ಹಾಜರುಪಡಿಸಿದ್ದು, ಇಬ್ಬರನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ನಾಲ್ವರು ಅಪ್ರಾಪ್ತರನ್ನು ಹಾಸನದ ರಿಮ್ಯಾಂಡ್ ಹೋಂಗೆ ಶಿಫ್ಟ್ ಮಾಡಲಾಗಿದೆ.

