ಕೊಪ್ಪಳ: ಕೊಪ್ಪಳ ಜಿಲ್ಲೆ ಗಂಗಾವತಿ ತಾಲೂಕಿನ ಹೆಬ್ಬಾಳ ಗ್ರಾಮದಲ್ಲಿ ಸತತ ಮಳೆಯಿಂದಾಗಿ ಶಿಥಿಲಗೊಂಡಿದ್ದ ಮನೆ ಗೋಡೆ ಕುಸಿದು ಒಂದೂವರೆ ವರ್ಷದ ಮಗು ಸಾವನ್ನಪ್ಪಿದೆ.
ಮನೆ ಕುಸಿದು ಒಂದೂವರೆ ವರ್ಷದ ಪ್ರಶಾಂತಿ ಸಾವನ್ನಪ್ಪಿದ್ದು, ಆರು ಜನ ಗಾಯಗೊಂಡಿದ್ದಾರೆ. ಹನುಮಂತ, ದುರ್ಗಮ್ಮ, ಭೀಮಮ್ಮ, ಹುಸೇನಪ್ಪ, ಪಕೀರಪ್ಪ ಸೇರಿ ಆರು ಜನರಿಗೆ ಗಂಗಾವತಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.