ಬೆಂಗಳೂರು: ಸಿಮೆಂಟ್ ಮಿಕ್ಸರ್ ಲಾರಿ ಅವಾಂತರಕ್ಕೆ ಮಗು ಬಲಿಯಾಗಿದೆ, ನವೆಂಬರ್ 7ರಂದು ಕುಂದಲಹಳ್ಳಿ ಕಾಲೋನಿಯಲ್ಲಿ ಘಟನೆ ನಡೆದಿದೆ.
ಮೋಲ್ಡಿಂಗ್ ಮುಗಿಸಿ ಬರುತ್ತಿದ್ದ ಸಿಮೆಂಟ್ ಮಿಕ್ಸರ್ ಲಾರಿ ವಿದ್ಯುತ್ ತಂತಿ ಎಳೆದು ತಂದಿದೆ. ವೈರಿಂಗ್ ಕಂಬ ಕಿತ್ತು ಬಂದು ಮನೆ ಗೋಡೆ ಕುಸಿದಿದೆ. ಆಟವಾಡುತ್ತಿದ್ದ ಮಗುವಿನ ಮೇಲೆ ಮನೆಯ ಗೋಡೆ ಅವಶೇಷ ಬಿದ್ದಿದ್ದು, 1 ವರ್ಷ 8 ತಿಂಗಳ ಮಗು ಪ್ರಣವ್ ಮೃತಪಟ್ಟಿದ್ದಾನೆ.
ಮನೆಯ ಗೋಡೆ ಕುಸಿದು ಆಟವಾಡುತ್ತಿದ್ದ ಮಗುವಿನ ಮೇಲೆ ಬಿದ್ದಿದ್ದು, ಕೂಡಲೇ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಈ ವೇಳೆಗೆ ಮಗು ಮೃತಪಟ್ಟಿದೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
