ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಗ್ರರ ದಾಳಿಯ ವಿಚಾರದಲ್ಲಿ ಪಾಕಿಸ್ತಾನ ಬೆನ್ನಿಗೆ ನಿಂತ ಚೀನಾ ತನ್ನ ನರಿ ಬುದ್ಧಿ ತೋರಿಸಿದೆ.
ಪಾಕಿಸ್ತಾನ ಪರ ನಿಂತು ಮತ್ತೆ ತನ್ನ ನರಿ ಬುದ್ಧಿ ತೋರಿಸಿದ ಚೀನಾ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿ ಪ್ರಕರಣದ ಬಗ್ಗೆ ತನಿಖೆ ನಡೆಸುವಂತೆ ಪಾಕಿಸ್ತಾನಕ್ಕೆ ಸಲಹೆ ನೀಡಿದೆ. ಉಗ್ರರನ್ನು ಪೋಷಿಸುತ್ತಿರುವ ಪಾಕಿಸ್ತಾನದ ವಿರುದ್ಧ ಎಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದೆ. ಪಾಕಿಸ್ತಾನದ ವಿರುದ್ಧ ವಿಶ್ವದೆಲ್ಲೆಡೆ ಆಕ್ರೋಶ ವ್ಯಕ್ತವಾಗುತ್ತಿದ್ದರೆ, ಚೀನಾ ಮಾತ್ರ ಪಾಕಿಸ್ತಾನಕ್ಕೆ ಪರ ನಿಂತು ನರಿ ಬುದ್ಧಿ ತೋರಿಸಿದೆ. ಪಹಲ್ಗಾಮ್ ದಾಳಿ ಬಗ್ಗೆ ತನಿಖೆಗೆ ಸಲಹೆ ನೀಡಿದ್ದಲ್ಲದೇ, ಹಣಕಾಸು ನೆರವಿನ ಭರವಸೆ ನೀಡಿದೆ.