ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ರಸ್ತೆ ವಿಭಜಕಕ್ಕೆ ಬಸ್ ಡಿಕ್ಕಿ: ಚಾಲಕ ಸೇರಿ ಇಬ್ಬರು ಸಾವು
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಬಳಿ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಬಸ್ ಚಾಲಕ ಮಹಮ್ಮದ್ ಮತ್ತು ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ. ಖಾಸಗಿ ಬಸ್ ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಾಂಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಕೋನಾಪುರ ಗ್ರಾಮದ ಬಳಿ ಘಟನೆ ನಡೆದಿದೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಲಾರಿ ಡಿಕ್ಕಿ: ಕಾರ್ ನಲ್ಲಿದ್ದ ದಂಪತಿ ಸಾವು
ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ದಂಪತಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ಕಣಿವೆ ಸಮೀಪ ನಡೆದಿದೆ. ಕಾರ್ ನಲ್ಲಿದ್ದ ದಂಪತಿ ಲೋಹಿತ್ ಪ್ರಸಾದ್(34), ನಿತ್ಯಾ ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ ಲೋಹಿತ್ ಚಿತ್ರದುರ್ಗದ ಬಿವಿಟಿ ಮೋಟಾರ್ಸ್ ಮಾಲೀಕರಾಗಿದ್ದಾರೆ. ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

