ಬೆಂಗಳೂರು: ಸಿಗರೇಟ್ ವಿಚಾರಕ್ಕೆ ಸಂಬಂಧಿಸಿದ ಜಗಳ ವಿಕೋಪಕ್ಕೆ ತಿರುಗಿ ಯುವಕನೊಬ್ಬನನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ 8 ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.
ಸಿಗರೇಟ್ ಸೇದುವ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ತಿರುಗಿ ಹರೀಶ್ ಎಂಬ ಯುವಕನನ್ನು ಬರ್ಬರವಾಗಿ ಹತ್ಯೆಗೈದ ಪ್ರಕರಣದಲ್ಲಿ 8 ಮಂದಿ ಆರೋಪಿಗಳಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. 2017ರಲ್ಲಿ ನಡೆದಿದ್ದ ಈ ಪ್ರಕರಣದ ವಿಚಾರಣೆ ಪೂರ್ಣಗೊಂಡ ಬಳಿಕ 59ನೇ ಸಿಸಿಎಚ್ ನ್ಯಾಯಾಲಯ ಶಿಕ್ಷೆ ಪ್ರಕಟಿಸಿದೆ.
ಬೆಂಗಳೂರಿನ ಶಾಂತಿನಗರದ ವ್ಯಾಪ್ತಿಯಲ್ಲಿ 2017 ರಲ್ಲಿ ಈ ಕೊಲೆ ನಡೆದಿತ್ತು. ಸಿಗರೇಟ್ ವಿಚಾರವಾಗಿ ಆರಂಭವಾದ ಗಲಾಟೆ ಬಳಿಕ ಆರೋಪಿಗಳು ಯುವಕ ಹರೀಶ್ ಮೇಲೆ ದಾಳಿ ನಡೆಸಿ ಹತ್ಯೆ ಮಾಡಿದ್ದರು. ಪ್ರಕರಣದ ತನಿಖೆ ನಡೆಸಿದ ಅಶೋಕನಗರ ಪೊಲೀಸರು ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ 59 ನೇ ಸಿಸಿಹೆಚ್ ನ್ಯಾಯಾಲಯ, ಆರೋಪಿಗಳ ವಿರುದ್ಧದ ಆರೋಪಗಳು ಸಾಬೀತಾಗಿವೆ ಎಂದು ತೀರ್ಮಾನಿಸಿ 8 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ನ್ಯಾಯಾಲಯದ ತೀರ್ಪು ಹೊರಬಿದ್ದಿದ್ದು, ಯುವಕನ ಕುಟುಂಬಕ್ಕೆ ನ್ಯಾಯ ದೊರೆತಂತಾಗಿದೆ.ಸಣ್ಣ ವಿಚಾರಕ್ಕೆ ಆರಂಭವಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.

