ಬೆಂಗಳೂರು: ‘ಡೆವಿಲ್’ ಚಿತ್ರದ ಚಿತ್ರೀಕರಣಕ್ಕಾಗಿ ಥಾಯ್ಲೆಂಡ್ ಗೆ ತೆರಳಿದ್ದ ನಟ ದರ್ಶನ್ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಜಾಮೀನು ಅರ್ಜಿಯ ಕುರಿತಾಗಿ ಸುಪ್ರೀಂ ಕೋರ್ಟ್ 10 ದಿನದೊಳಗೆ ತೀರ್ಪು ಪ್ರಕಟಿಸುವುದಾಗಿ ಹೇಳಿದೆ.
ಇದೇ ವೇಳೆ ದರ್ಶನ್ ಶೂಟಿಂಗ್ ಮುಗಿಸಿ ಪತ್ನಿಯೊಂದಿಗೆ ತಡರಾತ್ರಿ ಕೆಂಪೇಗೌಡ ಏರ್ಪೋರ್ಟ್ಗೆ ಬಂದಿಳಿದಿದ್ದಾರೆ. ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದು, ಟರ್ಮಿನಲ್ ನಿಂದ ಕಾರ್ ವರೆಗೆ ಅವರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸಿಐಎಸ್ಎಫ್ ಭದ್ರತೆ ನೀಡಲಾಗಿದೆ.