HomeKarnatakaBREAKING: ಜನಾರ್ದನ ರೆಡ್ಡಿ ಮನೆ ಎದುರು 2 ಗುಂಪುಗಳ ಗಲಾಟೆ: ಖಾಸಗಿ ಗನ್ ಮ್ಯಾನ್ ಗಳಿಂದ...

BREAKING: ಜನಾರ್ದನ ರೆಡ್ಡಿ ಮನೆ ಎದುರು 2 ಗುಂಪುಗಳ ಗಲಾಟೆ: ಖಾಸಗಿ ಗನ್ ಮ್ಯಾನ್ ಗಳಿಂದ ಫೈರಿಂಗ್: ಪೊಲೀಸರಿಂದ ಲಾಠಿಚಾರ್ಜ್

ಬಳ್ಳಾರಿ: ಬ್ಯಾನರ್ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆ ಆಗಿದೆ. ಬಳ್ಳಾರಿ ನಗರದ ಮಾಜಿ ಸಚಿವ ಜನಾರ್ದನ ರೆಡ್ಡಿ ಮನೆಯ ಮುಂದೆ ಘಟನೆ ನಡೆದಿದೆ.

ಎರಡು ಗುಂಪುಗಳ ನಡುವೆ ಕಲ್ಲು ತೂರಾಟ ನಡೆದಿದೆ. ಗಲಾಟೆಯ ವೇಳೆ ಖಾಸಗಿ ಗನ್ ಮ್ಯಾನ್ ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ.

ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿ ಆಪ್ತ ಸತೀಶ್ ರೆಡ್ಡಿ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದು ಕಲ್ಲು ತೂರಾಟ ನಡೆಸಲಾಗಿದೆ. ಗಲಾಟೆಯಾಗುತ್ತಿದ್ದಂತೆ ಮಾಜಿ ಸಚಿವ ಬಿ. ಶ್ರೀರಾಮುಲು ಸ್ಥಳಕ್ಕೆ ಆಗಮಿಸಿದ್ದಾರೆ. ಏಕಾಏಕಿ ಗಲಾಟೆ ಹಿನ್ನೆಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಪೊಲೀಸರ ಮೇಲೆಯೂ ಉದ್ರಿಕ್ತರ ಗುಂಪು ಕಲ್ಲುತೂರಾಟ ನಡೆಸಿದೆ. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ನಡೆಸಿದ್ದಾರೆ. ಜನಾರ್ದನ ರೆಡ್ಡಿ ಮನೆಯ ಮುಂದೆ ಬಿಜೆಪಿ ಕಾರ್ಯಕರ್ತರು ಜಮಾಯಿಸಿದ್ದಾರೆ. ಮುನ್ನೆಚ್ಚರಿಕೆಯಿಂದ ಸ್ಥಳದಲ್ಲಿ ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 3ರಂದು ನಡೆಯುವ ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಬ್ಯಾನರ್ ಅಳವಡಿಕೆ ವಿಚಾರಕ್ಕೆ ಬಳ್ಳಾರಿಯ ಹವಂಬಾವಿಯಲ್ಲಿರುವ ಜನಾರ್ದನ ರೆಡ್ಡಿ ಮನೆಯ ಬಳಿ ಗಲಾಟೆಯಾಗಿ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಉಂಟಾಗಿದೆ. ಮಾಹಿತಿ ಪಡೆದ ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಗಲಾಟೆ ನಿಯಂತ್ರಿಸಲು ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಮೇಲೆಯೂ ಕಿಡಿಗೇಡಿಗಳು ಕಲ್ಲು ತೂರಿದ್ದಾರೆ.

ಗಲಾಟೆಯ ವೇಳೆ ಸತೀಶ್ ರೆಡ್ಡಿ ಖಾಸಗಿ ಗನ್ ಮ್ಯಾನ್ ಗಳು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular