ಬೆಂಗಳೂರು : ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾ ನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಆರ್ ಸಿಬಿ ವಿಜಯೋತ್ಸವದಲ್ಲಿ ನಡೆದ ದುರಂತದಲ್ಲಿ 11 ಮಂದಿ ಮೃತಪಟ್ಟಿದ್ದರು. ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಪ್ರೀಡಂಪಾರ್ಕ್ ನಲ್ಲೇ ಬಿಜೆಪಿ ನಾಯಕರನ್ನು ವಶಕ್ಕೆ ಪಡೆದ ಉಪ್ಪಾರಪೇಟೆ ಠಾಣೆ ಪೊಲೀಸರು ವಾಹನದಲ್ಲಿ ಕರೆದೊಯ್ದಿದ್ದಾರೆ.

