HomeKarnatakaBREAKING : ಸಿಎಂ ಜನತಾ ದರ್ಶನ : ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸ್ಥಳದಲ್ಲೇ...

BREAKING : ಸಿಎಂ ಜನತಾ ದರ್ಶನ : ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸ್ಥಳದಲ್ಲೇ ಪರಿಹಾರ

ಬೆಂಗಳೂರು : ಬೆಂಗಳೂರಿನಲ್ಲಿ ಸಿಎಂ ಜನತಾ ದರ್ಶನ ನಡೆಯುತ್ತಿದ್ದು, ಸಮಸ್ಯೆ ಹೇಳಿಕೊಂಡ ವಿಶೇಷ ಚೇತನ ಯುವತಿಗೆ ಸಿಎಂ ಸ್ಥಳದಲ್ಲೇ ಪರಿಹಾರ ಕಲ್ಪಿಸಿದ್ದಾರೆ.

ಡಬ್ಬಲ್ ಡಿಗ್ರಿ ಮುಗಿಸಿರುವ ಬೆಂಗಳೂರಿನ ವಿಶೇಷ ಚೇತನ ಯುವತಿ ನವ್ಯಶ್ರೀ ಅವರು ತಾಯಿ ರಮಾಮಣಿ ಅವರ ಜತೆ ಬಂದು ಉದ್ಯೋಗಕ್ಕಾಗಿ ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದರು. ಉದ್ಯೋಗ ಮೇಳದ ವೇಳೆ ಈ ಅರ್ಜಿಯನ್ನು ಪರಿಗಣಿಸುವಂತೆ ಮುಖ್ಯಮಂತ್ರಿಗಳು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.

ಆಡಳಿತ ಜನರ ಬಳಿಗೆ ಹೋಗಬೇಕು, ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಖುದ್ದಾಗಿ ಅಹವಾಲುಗಳನ್ನು ಆಲಿಸಿ ಪರಿಹಾರ ಒದಗಿಸುವ ಸಲುವಾಗಿ ಜನಸ್ಪಂದನ ಕಾರ್ಯಕ್ರಮ ನಡೆಸುತ್ತಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular