ಬೆಂಗಳೂರು : ಹಿರಿಯ ನಟ ದ್ವಾರಕೀಶ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ ‘ಪ್ರಚಂಡ ಕುಳ್ಳ’ ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು. ಡಾ. ರಾಜ್ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು. ದ್ವಾರಕೀಶ್ ಅವರ ನಿಧನದಿಂದ ಕನ್ನಡ ಚಿತ್ರರಂಗ ಬಡವಾಗಿದೆ. ಅವರ ಆತ್ಮಕ್ಕೆ ಶಾಂತಿ ದೊರಕಲಿ, ಕುಟುಂಬವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.
ಡಿಸಿಎಂ ಡಿಕೆಶಿ ಸಂತಾಪ
ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ, ಭಗವಂತನು ಅವರ ಕುಟುಂಬಕ್ಕೆ ಅಗಲಿಕೆಯ ನೋವು ಸಹಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಡಿಸಿಎಂ ಡಿಕೆಶಿ ಸಂತಾಪ
ಸೂಚಿಸಿದ್ದಾರೆ.
ನಟ, ನಿರ್ದೇಶಕ, ನಿರ್ಮಾಪಕರಾಗಿ ಬಹುಕಾಲ ಕನ್ನಡ ಚಿತ್ರರಂಗದ ಸೇವೆಗೈದ ಕನ್ನಡಿಗರ ಪ್ರೀತಿಯ 'ಪ್ರಚಂಡ ಕುಳ್ಳ' ದ್ವಾರಕೀಶ್ ಅವರ ನಿಧನದ ಸುದ್ದಿ ತಿಳಿದು ದುಃಖವಾಯಿತು.
ಡಾ. ರಾಜ್ಕುಮಾರ್ ಮತ್ತು ಡಾ. ವಿಷ್ಣುವರ್ಧನ್ ಅವರಂತಹ ಮೇರು ನಟರೊಂದಿಗೆ ಪರದೆ ಹಂಚಿಕೊಳ್ಳುತ್ತಿದ್ದರೂ ಹಾಸ್ಯಭರಿತ ನಟನೆಯ ಮೂಲಕ ನೋಡುಗರ ಮನದಲ್ಲಿ ತಮ್ಮದೇ ಆದ ಛಾಪು… pic.twitter.com/ARyuMzFMC0— Siddaramaiah (@siddaramaiah) April 16, 2024
ಹಿರಿಯ ನಟ, ನಿರ್ದೇಶಕ ಹಾಗೂ ನಿರ್ಮಾಪಕರಾದ ಶ್ರೀ ದ್ವಾರಕೀಶ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವುಂಟಾಯಿತು. 1964ರಲ್ಲಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಅವರು, ಹಾಸ್ಯ ಕಲಾವಿದ, ನಾಯಕ ಹಾಗೂ ಪೋಷಕ ನಟನಾಗಿ ಪಾತ್ರಗಳಿಗೆ ಜೀವ ತುಂಬಿದ್ದಾರೆ. ಕನ್ನಡ ಚಿತ್ರರರಂಗಕ್ಕೆ ಅಮೂಲ್ಯ ಕೊಡುಗೆ ನೀಡಿದ ದ್ವಾರಕೀಶ್ ಅವರ ಆತ್ಮಕ್ಕೆ… pic.twitter.com/VHYCGZtGSJ
— DK Shivakumar (@DKShivakumar) April 16, 2024