ಕೊಪ್ಪಳ : ಅಂತಹ ಸನ್ನಿವೇಶ ಬಂದರೆ H.D ಕುಮಾರಸ್ವಾಮಿಯನ್ನೂ ಅರೆಸ್ಟ್ ಮಾಡ್ತೀವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕೊಪ್ಪಳದ ಗಿಣಗೇರಾ ಏರ್ ಸ್ಟ್ರಿಪ್ ನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಪ್ರಾಸಿಕ್ಯೂಷನ್ ಅನುಮತಿ ಕೊಡುತ್ತಾರೆ ಎಂದು ಸಿದ್ದರಾಮಯ್ಯ ಭಯ ಬಿದ್ದಿದ್ದಾರೆ ಎಂದರು. ಕುಮಾರಸ್ವಾಮಿ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು ತನ್ನ ವಿರುದ್ಧ ಮಾತ್ರವೇ ಯಾವುದೇ ತನಿಖಾ ವರದಿಯನ್ನು ಆಧರಿಸಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದು ತಾರತಮ್ಯವಲ್ಲವೇ ಎಂದು ಸಿಎಂ ಪ್ರಶ್ನಿಸಿದರು.
ಕುಮಾರಸ್ವಾಮಿಯನ್ನು ಬಂಧಿಸುವ ಬಗ್ಗೆ ಈಗಲೇ ಏನನ್ನೂ ಕೂಡ ಹೇಳಲಾಗುವುದಿಲ್ಲ. ತನಿಖೆಗೆ ರಾಜ್ಯಪಾಲರು ಅನುಮತಿ ಕೊಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ ಎಂದರು.ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ.
ಹೆಚ್ಡಿಕೆ ಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದು ತಾರತಮ್ಯವಲ್ಲದೆ ಮತ್ತೇನು? ಕುಮಾರಸ್ವಾಮಿಯವರು ಈಗಲೇ ಹೆದರಿದ್ದಾರೆ. ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಬಹುದು ಎಂಬ ಭಯ ಅವರನ್ನು ಕಾಡುತ್ತಿದೆ. ಅವರ ವಿರುದ್ಧ ಲೋಕಾಯುಕ್ತ ಎಸ್.ಐ.ಟಿ ಯವರು ತನಿಖಾ ವರದಿ ನೀಡಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿದ್ದಾಗ್ಯೂ ರಾಜ್ಯಪಾಲರಿಂದ ಯಾವುದೇ ಕ್ರಮವಾಗದ ಕಾರಣ, ಎಸ್.ಐ.ಟಿ ಮತ್ತೊಮ್ಮೆ ಅರ್ಜಿ ಸಲ್ಲಿಸಿದೆ ಎಂದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಬಂಧಿಸುವ ಅಗತ್ಯಬಿದ್ದರೆ ಮುಲಾಜಿಲ್ಲದೆ ಬಂದಿಸ್ತೀವಿ. ಆದರೆ ಈಗ ಇನ್ನೂ ಬಂಧಿಸುವ ಸನ್ನಿವೇಶ ಬಂದಿಲ್ಲ.@hd_kumaraswamy ಯವರ ಪ್ರಕರಣದಲ್ಲಿ ವಿಳಂಬ ಧೋರಣೆ ಅನುಸರಿಸುತ್ತಿರುವ ರಾಜ್ಯಪಾಲರು, ನನ್ನ ವಿರುದ್ಧ ಮಾತ್ರ ಯಾವುದೇ ತನಿಖಾ ವರದಿಯನ್ನು ಆಧರಿಸದೇ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದಾರೆ.…
— Siddaramaiah (@siddaramaiah) August 21, 2024

