ಚಿತ್ರದುರ್ಗ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರ್ನಾಟಕ ಶೋಷಿತ ಜಾತಿ-ಸಮುದಾಯಗಳ ಮಹಾ ಒಕ್ಕೂಟ ಮತ್ತು ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಚಿತ್ರದುರ್ಗದಲ್ಲಿ ಆಯೋಜಿಸಿದ್ದ “ಶೋಷಿತರ ಜಾಗೃತಿ ಸಮಾವೇಶವನ್ನು” ಉದ್ಘಾಟಿಸಿದರು.
ಸಮಾವೇಶದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರುಗಳಾದ ಎಚ್.ಸಿ.ಮಹದೇವಪ್ಪ, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ಖಾನ್, ಬೋಸ್ ರಾಜು, ಕೆ.ಎಚ್.ಮುನಿಯಪ್ಪ, ಬೈರತಿ ಸುರೇಶ್, ಸಂತೋಷ್ ಲಾಡ್, ಮಧು ಬಂಗಾರಪ್ಪ, ದಿನೇಶ್ ಗುಂಡೂರಾವ್, ಆರ್.ಬಿ.ತಿಮ್ಮಾಪುರ್, ನಾಗೇಂದ್ರ, ಡಿ.ಸುಧಾಕರ್, ಶಿವರಾಜ್ ತಂಗಡಗಿ, ರಹೀಂಖಾನ್, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಅಧ್ಯಕ್ಷರಾದ ರಾಮಚಂದ್ರಪ್ಪ, ದಲಿತ ಸಂಘರ್ಷ ಸಮಿತಿ ಮುಖಂಡರಾದ ಮಾವಳ್ಳಿ ಶಂಕರ್, ಮಾಜಿ ಸಚಿವ ಎಚ್.ಎಂ.ರೇವಣ್ಣ, ಎಚ್.ಆಂಜನೇಯ, ಮಾಜಿ ಸಂಸದ ಉಗ್ರಪ್ಪ ಹಾಗೂ ಶಾಸಕರುಗಳಾದ ಪ್ರಕಾಶ್ ರಾಥೋಡ್, ನಾಗರಾಜ್ ಯಾದವ್, ಅಜಯ್ ಸಿಂಗ್, ನಸೀರ್ ಅಹಮದ್ ಸೇರಿ 20ಕ್ಕೂ ಹೆಚ್ಚು ಶಾಸಕರುಗಳು ಉಪಸ್ಥಿತರಿದ್ದರು.