BREAKING : ‘ನಮ್ಮ ಮೆಟ್ರೋ’ ಟಿಕೆಟ್ ದರ ಕಡಿಮೆ ಮಾಡಲು ‘BMRCL’ಗೆ CM ಸಿದ್ದರಾಮಯ್ಯ ಸೂಚನೆ.!

ಬೆಂಗಳೂರು : ‘ನಮ್ಮ ಮೆಟ್ರೋ’ ಟಿಕೆಟ್ ದರ ಕಡಿಮೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಬಿಎಂಆರ್ ಸಿಎಲ್ (BMRCL) ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ  ‘ಬೆಂಗಳೂರು ಮೆಟ್ರೊ ರೈಲು ನಿಗಮ (ಬಿಎಂಆರ್ಸಿಎಲ್) ಇತ್ತೀಚೆಗೆ ಪರಿಷ್ಕರಿಸಿರುವ ಪ್ರಯಾಣ ದರ ಏರಿಕೆ ಹಲವು ರೀತಿಯ ವೈಪರೀತ್ಯಗಳಿಂದ ಕೂಡಿದ್ದು, ಕೆಲವು ಕಡೆಗಳಲ್ಲಿ ಪ್ರಯಾಣ ದರ ದುಪ್ಪಟ್ಟಾಗಿರುವುದನ್ನು ಗಮನಿಸಿದ್ದೇನೆ. ಇದರ ವಿರುದ್ಧ ವ್ಯಕ್ತವಾದ ಸಾರ್ವಜನಿಕರ ವಿರೋಧವನ್ನು ಪರಿಗಣಿಸಿ ಎಲ್ಲೆಲ್ಲಿ ಅಸಹಜ ರೀತಿಯಲ್ಲಿ ದರ ಏರಿಕೆಯಾಗಿದೆಯೋ ಅಂತಹ ಕಡೆಗಳಲ್ಲಿ ಪ್ರಯಾಣ ದರ ಇಳಿಸುವಂತೆ ಬಿಎಂಆರ್ಸಿಎಲ್ ವ್ಯವಸ್ಥಾಪಕ ನಿರ್ದೇಶಕರಿಗೆ ತಿಳಿಸಿದ್ದೇನೆ.

ಮೆಟ್ರೊ ರೈಲು ವ್ಯವಸ್ಥೆ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆ ಮಾಡಬೇಕಾಗಿರುವ ಸಾರ್ವಜನಿಕ ಸಾರಿಗೆ ವ್ಯವಸ್ಥೆಯಾಗಿರುವ ಕಾರಣ ಪ್ರಯಾಣ ದರ ಪರಿಷ್ಕರಣೆ ಅನಿವಾರ್ಯವಾಗಿತ್ತು ಎನ್ನುವುದು ನಿಜವಾದರೂ ಅಂತಿಮವಾಗಿ ಪ್ರಯಾಣಿಕರ ಹಿತರಕ್ಷಣೆ ಮಾಡಬೇಕಾಗಿರುವುದು ನಮ್ಮ ಕರ್ತವ್ಯ ಎನ್ನುವುದನ್ನು ಬಿಎಂಆರ್ಸಿಎಲ್ ಗಮನಕ್ಕೆ ತಂದಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಜ್ಯ ರಾಜಧಾನಿ ಬೆಂಗಳೂಗರಿಗೆ ಒಂದಾದ ಮೇಲೊಂದರಂತೆ ಬೆಲೆ ಏರಿಕೆ ಬಿಸಿ ತಟ್ಟಿದೆ. ನಮ್ಮ ಮೆಟ್ರೋ ಪ್ರಯಾಣಿಕರಿಗೆ ಬಿಎಂ ಆರ್ ಸಿ ಎಲ್ ಬಿಗ್ ಶಾಕ್ ನೀಡಿದ್ದು ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿ ಆದೇಶಿಸಿದೆ. ಮೆಟ್ರೋ ದರ ಹೆಚ್ಚಳಕ್ಕೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read