BREAKING : ʻಅಂಧ ಮಕ್ಕಳ ಶಾಲೆʼಯ ನಿವೇಶನಕ್ಕಾಗಿ ʻಜನತಾ ದರ್ಶನʼದಲ್ಲಿ ಮನವಿ : ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹರಿಸುವ ಕೆಲಸ ಮಾಡುತ್ತಿದ್ದಾರೆ.

ರಾಣೆಬೆನ್ನೂರಿನ ಜೀವ ಬೆಳಕು ಅಂಧ ಮಕ್ಕಳ ಶಾಲೆಗೆ ಸಿ.ಎ. ನಿವೇಶನ ಮಂಜೂರಾಗಿದ್ದು, ಇದಕ್ಕಾಗಿ 9 ಲಕ್ಷ ರೂ. ಪಾವತಿಸುವಂತೆ ಸೂಚಿಸಿದ್ದಾರೆ. ಇದನ್ನು ಪಾವತಿಸಲು ಶಕ್ತರಿಲ್ಲದ ಕಾರಣ ಹಣ ಪಾವತಿಯಿಂದ ವಿನಾಯಿತಿ ನೀಡುವಂತೆ ಜನತಾ ದರ್ಶನದಲ್ಲಿ ಮನವಿ ಮಾಡಿದರು.

ಆನ್ ಲೈನ್ ಮೂಲಕ ಹಾವೇರಿ ಜಿಲ್ಲಾಧಿಕಾರಿಗಳನ್ನು ಸಂಪರ್ಕಿಸಿದ ಮುಖ್ಯಮಂತ್ರಿ Siddaramaiah ಅವರು, ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸುವ ಮೂಲಕ ಅಂಧಮಕ್ಕಳ ಬದುಕಿಗೆ ನೆಮ್ಮದಿಯ ಸೂರು ಕಲ್ಪಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read