HomeLatest NewsBREAKING: ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯೊಂದಿಗೆ ವಿಶ್ವವಿಖ್ಯಾತ ‘ಜಂಬೂಸವಾರಿ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

BREAKING: ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯೊಂದಿಗೆ ವಿಶ್ವವಿಖ್ಯಾತ ‘ಜಂಬೂಸವಾರಿ’ಗೆ ಸಿಎಂ ಸಿದ್ಧರಾಮಯ್ಯ ಚಾಲನೆ

ಮೈಸೂರು: ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯ ಮೂಲಕ ಜಂಬೂ ಸವಾರಿ ಮೆರವಣಿಗೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ.

ಮೈಸೂರಿನ ಅರಮನೆ ಮೈದಾನದಲ್ಲಿ ಶುಭ ಕುಂಭ ಲಗ್ನದಲ್ಲಿ ಜಂಬೂಸವಾರಿಗೆ ಸಿಎಂ ಚಾಲನೆ ನೀಡಿದ್ದಾರೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂಸವಾರಿ ಮೆರವಣಿಗೆ ಸಾಗಲಿದೆ. ಲಕ್ಷಾಂತರ ಮಂದಿ ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯನ್ನು ಕಣ್ತುಂಬಿಕೊಂಡಿದ್ದಾರೆ.

ತಾಯಿ ಚಾಮುಂಡೇಶ್ವರಿ ವಿರಾಜಮಾನರಾಗಿರುವ 750 ಕೆಜಿ ಚಿನ್ನದ ಅಂಬಾರಿಯನ್ನು ಹೊತ್ತ ಅಭಿಮನ್ಯು ಆನೆ ಪುಷ್ಪಾರ್ಚನೆ ಸ್ಥಳಕ್ಕೆ ಆಗಮಿಸಿದ ವೇಳೆ ಸಿಎಂ ಸೇರಿದಂತೆ ಗಣ್ಯರು ಪುಷ್ಪಾರ್ಚನೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಚಿವ ಡಾ.ಹೆಚ್.ಸಿ. ಮಹಾದೇವಪ್ಪ, ಸಂಸದ ಯದುವೀರ್ ಒಡೆಯರ್ ಸೇರಿದಂತೆ ಹಲವು ಗಣ್ಯರು ಪುಷ್ಪಾರ್ಚನೆ ಮಾಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿ ಜಂಬೂಸವಾರಿ ಮೆರವಣಿಗೆಯಲ್ಲಿ ವಿವಿಧ ಜಿಲ್ಲೆಗಳ ಆಕರ್ಷಕ 58 ಸ್ತಬ್ಧಚಿತ್ರಗಳು, 150ಕ್ಕೂ ಹೆಚ್ಚು ಕಲಾತಂಡಗಳು ಭಾಗಿಯಾಗಿದ್ದು, ಮೆರವಣಿಗೆಗೆ ಮೆರುಗು ತಂದಿವೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular