BREAKING : 5 ನೇ ಗ್ಯಾರಂಟಿ ʻಯುವನಿಧಿʼಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ : ಇಂದಿನಿಂದ ಫಲಾನುಭವಿಗಳ ಖಾತೆಗೆ ಹಣ ಜಮಾ

ಶಿವಮೊಗ್ಗ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅರ್ಹ  ಫಲಾನುಭವಿಗಳಿಗೆ ನೇರ ವರ್ಗಾವಣೆ ಮಾಡುವ ಮೂಲಕ ಅಧಿಕೃತವಾಗಿ ಚಾಲನೆ ನೀಡಿದ್ದಾರೆ.

ಶಿವಮೊಗ್ಗದ ಫ್ರೀಡಂ ಪಾರ್ಕ್‌ ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಯುವನಿಧಿ ಯೋಜನೆಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಚಾಲನೆ ನೀಡಿದ್ದಾರೆ. ಈ ಮೂಲಕ ಇಂದು ಅರ್ಜಿ ಸಲ್ಲಿಸಿದ ಅರ್ಹ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಆಗಲಿದೆ.

ಈ ವೇಳೆ ಮಾತನಾಡಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಿವಮೊಗ್ಗದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇತಿಹಾಸ ಸೃಷ್ಟಿಸಲಾಗಿದೆ.  ಸ್ವಾಮಿ ವಿವೇಕಾನಂದರ ಜಯಂತಿಯ ದಿನದಂದು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಿದ ಕುವೆಂಪು ಅವರ ನಾಡಿನಲ್ಲಿ ಯುವನಿಧಿ ಯೋಜನೆಗೆ ಚಾಲನೆ ನೀಡಲಾಗಿದೆ ಎಂದರು.

ಪದವೀದಧರರಿಗೆ ರೂ. 3000/- ಮತ್ತು ಡಿಪ್ಲೋಮಾ ತೇರ್ಗಡೆಯಾದವರಿಗೆ ರೂ.1500/- ನಿರುದ್ಯೋಗ ಭತ್ಯೆಯನ್ನು 2 ವರ್ಷದವರೆಗೆ ನೀಡಲಾಗುವುದು. ಯುವನಿಧಿ ಯೋಜನೆಗೆ ಅಭ್ಯರ್ಥಿಗಳು ಸೇವಾ ಸಿಂಧು ಜಾಲತಾಣ https://sevasindhugs.karnataka.gov.in/ ನಲ್ಲಿ ಅರ್ಜಿ ಸಲ್ಲಿಸಬೇಕು.

ಯುವನಿಧಿ ಯೋಜನೆಯ ಫಲಾನುಭವಿಗಳಾಗಲು ಪದವಿ, ಡಿಪ್ಲೋಮಾಗಳನ್ನು 2022-23ನೇ ಸಾಲಿನಲ್ಲಿ ವ್ಯಾಸಂಗ ಮಾಡಿರಬೇಕು ಹಾಗೂ 2023ರಲ್ಲಿ ತೇರ್ಗಡೆಯಾಗಿದ್ದು 180 ದಿವಸಗಳವರೆಗೆ ನಿರುದ್ಯೋಗಿಗಳಾಗಿ ಅಭ್ಯರ್ಥಿಗಳು ಕನಿಷ್ಠ 6 ವರ್ಷ ಕರ್ನಾಟಕದ ನಿವಾಸಿಗಳಾಗಿರಬೇಕು. ಅಂತವರು ಈ ಯೋಜನೆ ಫಲಾನುಬಿವಿಗಳಾಗುತ್ತಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read