HomeLatest NewsBREAKING: ವಿಮಾನದಲ್ಲಿ ಅಮೆರಿಕ ಮಹಿಳೆ ಜೀವ ಉಳಿಸಿದ ಅಂಜಲಿ ನಿಂಬಾಳ್ಕರ್: ಸಮಾಜಕ್ಕೆ ಮಾದರಿ ಎಂದು ಮೆಚ್ಚುಗೆ...

BREAKING: ವಿಮಾನದಲ್ಲಿ ಅಮೆರಿಕ ಮಹಿಳೆ ಜೀವ ಉಳಿಸಿದ ಅಂಜಲಿ ನಿಂಬಾಳ್ಕರ್: ಸಮಾಜಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ ಸಿಎಂ ಸಿದ್ಧರಾಮಯ್ಯ

ಗೋವಾ-ಹೊಸದಿಲ್ಲಿ ನಡುವಿನ ವಿಮಾನ ಪ್ರಯಾಣದ ವೇಳೆ ಖಾನಾಪುರದ ಮಾಜಿ ಶಾಸಕಿಯಾದ ಡಾ.ಅಂಜಲಿ ನಿಂಬಾಳ್ಕರ್ ಅವರು ಅಮೇರಿಕಾದ ಮಹಿಳೆಯೊಬ್ಬರಿಗೆ ತುರ್ತು ವೈದ್ಯಕೀಯ ನೆರವಿನ ಅಗತ್ಯತೆಯನ್ನು ಅರಿತು, ತಕ್ಷಣವೇ ಸಿಪಿಆರ್ ನೀಡಿ ಮಹಿಳೆಯ ಪ್ರಾಣ ಉಳಿಸಿದ ವಿಚಾರ ಕೇಳಿ ಹೆಮ್ಮೆಯೆನಿಸಿತು ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ.

ವೈದ್ಯ ವೃತ್ತಿ ತೊರೆದು ಸಕ್ರಿಯ ರಾಜಕೀಯದಲ್ಲಿದ್ದರೂ ಸಕಾಲದಲ್ಲಿ ರೋಗಿಯೊಬ್ಬರ ನೆರವಿಗೆ ಧಾವಿಸಿದ ಅಂಜಲಿಯವರ ಸೇವಾ ಮನೋಭಾವ ಮತ್ತು ಸಮಯಪ್ರಜ್ಞೆ ಅತ್ಯಂತ ಶ್ಲಾಘನೀಯ. ಅಧಿಕಾರವಿರಲಿ, ಇಲ್ಲದಿರಲಿ ಜನಸೇವೆ ಎಂದು ಬಂದಾಗ ಪ್ರತಿಫಲಾಪೇಕ್ಷೆ ಇಲ್ಲದೆ ತನ್ನ ಕೈಲಾದ ಸಹಾಯಕ್ಕೆ ನಿಲ್ಲುವ ಅಂಜಲಿಯಂತವರು ಸಮಾಜಕ್ಕೆ ಮಾದರಿ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ನೂರುಕಾಲ ಅಂಜಲಿಯವರಿಗೆ ಆಯಸ್ಸು ಆರೋಗ್ಯ ನೀಡಿ, ಕಷ್ಟದಲ್ಲಿರುವ ಜೀವಗಳಿಗೆ ಅವರಿಂದ ಇನ್ನಷ್ಟು ನೆರವು ಸಿಗುವಂತಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular