ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಬಿ.ಎಂ. ಪಾರ್ವತಿ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಶೇಷಾದ್ರಿಪುರಂ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿಗಾಗಿ ದೆಹಲಿಗೆ ತೆರಳಿದ್ದ ಸಿಎಂ ಸಿದ್ಧರಾಮಯ್ಯ ತಡರಾತ್ರಿಯೇ ಬೆಂಗಳೂರಿಗೆ ಆಗಮಿಸಿದ್ದು, ಆಸ್ಪತ್ರೆಗೆ ಭೇಟಿ ನೀಡಿ ಪತ್ನಿ ಆರೋಗ್ಯ ವಿಚಾರಿಸಿದ್ದಾರೆ.
ಆಸ್ಪತ್ರೆ ಬಳಿ ಆರೋಗ್ಯ ವಿಚಾರಿಸಿದ ಅವರು ಮಾತನಾಡಿ, ಪತ್ನಿ ಆರೋಗ್ಯ ಸ್ಥಿರವಾಗಿದೆ. ಏನೂ ಸಮಸ್ಯೆ ಇಲ್ಲ. ಶ್ವಾಸಕೋಶ ಸೋಂಕು ಇದೆ. ಈಗ ಸುಧಾರಣೆ ಕಾಣುತ್ತಿದೆ. ಇನ್ನು ಎರಡು ಮೂರು ದಿನ ಆಸ್ಪತ್ರೆಯಲ್ಲಿ ಇರಬೇಕಾಗುತ್ತದೆ ಎಂದು ಹೇಳಿದ್ದಾರೆ.
