HomeLatest NewsBREAKING: RSS, ಬಜರಂಗದಳ ವಿರುದ್ಧ ಹೇಳಿಕೆ, ಸಿಎಂ ಸಿದ್ಧರಾಮಯ್ಯಗೆ ಕೋರ್ಟ್ ನೋಟಿಸ್

BREAKING: RSS, ಬಜರಂಗದಳ ವಿರುದ್ಧ ಹೇಳಿಕೆ, ಸಿಎಂ ಸಿದ್ಧರಾಮಯ್ಯಗೆ ಕೋರ್ಟ್ ನೋಟಿಸ್

ಬೆಂಗಳೂರು: ಆರ್.ಎಸ್.ಎಸ್., ಬಜರಂಗದಳ ವಿರುದ್ಧ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿದ್ದಕ್ಕೆ ಸಂಬಂಧಿಸಿದಂತೆ ಕೋರ್ಟ್ ನೋಟಿಸ್ ಜಾರಿ ಮಾಡಿದೆ.

ವಕೀಲ ಕಿರಣ್ ಎಂಬುವವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿದ 42ನೇ ಎಸಿಜೆಎಂ ನ್ಯಾಯಾಲಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೋಟಿಸ್ ಜಾರಿ ಮಾಡಿದೆ. ಕೇಸು ಸ್ವೀಕರಿಸುವ ಮೊದಲು ಸಿದ್ದರಾಮಯ್ಯ ವಾದ ಆಲಿಸಲು ಅವಕಾಶ ಕಲ್ಪಿಸಿದೆ.

ಬಿಎನ್ಎಸ್ಎಸ್ ಸೆಕ್ಷನ್ 253ರ ಅಡಿ ನ್ಯಾಯಾಲಯ ನೋಟಿಸ್ ನೀಡಿದೆ. ಅತಿ ಹೆಚ್ಚು ಅಪರಾಧ ಕೃತ್ಯಗಳಾಗುತ್ತಿರುವುದೇ ಆರ್.ಎಸ್.ಎಸ್., ಬಜರಂಗದಳದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸದನದಲ್ಲಿ ಹೇಳಿಕೆ ನೀಡಿದ್ದರು. ಜನರ ಭಾವನೆಗಳಿಗೆ ಧಕ್ಕೆ ಆರೋಪದಡಿ ಕಿರಣ್ ಕೇಸು ದಾಖಲಿಸಿದ್ದರು. ಜೂನ್ 26 ರ ಒಳಗೆ ಸಿಎಂ ಕೋರ್ಟ್ ನೋಟಿಸ್ ಗೆ ಉತ್ತರಿಸಬೇಕಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular