HomeKarnatakaBREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

BREAKING : ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ

ಬೆಂಗಳೂರು : ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆಗೆ ಕ್ಷಣ ಶುರುವಾಗಿದ್ದು, ಈಗಾಗಲೇ ಬಜೆಟ್ ಪ್ರತಿಗಳನ್ನು ಸಿಬ್ಬಂದಿಗಳು ವಿಧಾನಸೌಧದಕ್ಕೆ ತಂದಿದ್ದಾರೆ.

ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು 14 ನೇ ಬಜೆಟ್ ಮಂಡಿಸಲಿದ್ದು, ಗ್ಯಾರಂಟಿ ಯೋಜನೆಗಳ ಜೊತೆಗೆ ಹಲವು ಯೋಜನೆಗಳನ್ನು ಘೋಷಣೆ ಮಾಡುವ ಸಾಧ್ಯತೆ ಇದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿಎಂ ಸಿದ್ದರಾಮಯ್ಯ ಇಂದು ಮಹತ್ವದ ರಾಜ್ಯ ಬಜೆಟ್ ಮಂಡಿಸಲಿದ್ದಾರೆ. ಈ ಅವಧಿಯ ಕಾಂಗ್ರೆಸ್ ಸರ್ಕಾರದ ಮೊದಲ ಬಜೆಟ್ ಇದಾಗಲಿದೆ. ಈಗಾಗಲೇ 13 ಬಜೆಟ್ ಮಂಡಿಸಿರುವ ಸಿದ್ದರಾಮಯ್ಯ ಇದೀಗ 14 ನೇ ಬಾರಿ ಬಜೆಟ್ ಮಂಡಿಸಲಿದ್ದಾರೆ. ಸಿದ್ದರಾಮಯ್ಯ  ಬಜೆಟ್‌ ಮೇಲೆ ರಾಜ್ಯ ಜನರ ನಿರೀಕ್ಷೆ ಹೆಚ್ಚಾಗಿದೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಸರ್ಕಾರ ಬಜೆಟ್ ಮಂಡಿಸುವ ಸಾಧ್ಯತೆ ಇದೆ. ಸಿಎಂ ಸಿದ್ದರಾಮಯ್ಯ ಬಜೆಟ್‌ ಮೇಲೆ ರಾಜ್ಯದ ಜನರು ಹಲವು ನಿರೀಕ್ಷೆಗಳನ್ನು ಇಟ್ಟುಕೊಂಡಿದ್ದಾರೆ. ಇವುಗಳನ್ನೆಲ್ಲಾ ಗಮನದಲ್ಲಿ ಇರಿಸಿಕೊಂಡು, ಮುಂದಿನ ಚುನಾವಣೆಗೂ ಅನುಕೂಲವಾಗುವಂತೆ, ಶ್ರೀಸಾಮಾನ್ಯನಿಗೆ ಹೊರೆಯಾಗದಂತೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಾರಾ ಎಂಬ ಪ್ರಶ್ನೆಗೆ ಕೆಲವೇ ಕ್ಷಣಗಳಲ್ಲಿ ಉತ್ತರ ಸಿಗಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular