BREAKING : ವೀರಸೌಧದಲ್ಲಿ ‘ಮಹಾತ್ಮ ಗಾಂಧಿ’ ಪುತ್ಥಳಿ , ‘ಫೋಟೋ ಗ್ಯಾಲರಿ’ ಅನಾವರಣಗೊಳಿಸಿದ CM ಸಿದ್ದರಾಮಯ್ಯ.!

ಬೆಂಗಳೂರು : ವೀರಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಮಹಾತ್ಮ ಗಾಂಧಿ ಪುತ್ಥಳಿ ಹಾಗೂ ಫೋಟೋ ಗ್ಯಾಲರಿಯನ್ನು ಅನಾವರಣಗೊಳಿಸಿದರು.

ಗಾಂಧಿ ಭಾರತ – ಬೆಳಗಾವಿಯಲ್ಲಿ ನಡೆದ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನದ ಅಂಗವಾಗಿ ಇಂದು ವೀರಸೌಧದಲ್ಲಿ ಮಹಾತ್ಮ ಗಾಂಧಿಯವರ ಪುತ್ಥಳಿ ಅನಾವರಣಗೊಳಿಸಿ, ಬಳಿಕ ಮಹಾತ್ಮ ಗಾಂಧಿಯವರ ಅಧ್ಯಕ್ಷತೆಯಲ್ಲಿ ಎಐಸಿಸಿ ಸಭೆ ನಡೆದಿದ್ದ ಸ್ಥಳದ ಸಭಾಂಗಣದಲ್ಲಿನ ಫೋಟೋ ಗ್ಯಾಲರಿಯನ್ನು ಚರಕ ನೂಲುವ ಮೂಲಕ ಉದ್ಘಾಟಿಸಿ, ನಂತರ ಮಹಿಳಾ ಸ್ವ ಸಹಾಯ ಸಂಘಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಉದ್ಘಾಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಡಿಸೆಂಬರ್ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿ ಪ್ರತಿಮೆ ಅನಾವರಣ

1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಗುತ್ತಿದ್ದು, ಡಿಸೆಂಬರ್ 27ರಂದು ಸುವರ್ಣಸೌಧದಲ್ಲಿ ಗಾಂಧೀಜಿಯವರ ಪ್ರತಿಮೆ ಅನಾವರಣಗೊಳಿಸಲಾಗುವುದು. ನನ್ನನ್ನು ಸೇರಿದಂತೆ ಎಐಸಿಸಿ ಅಧ್ಯಕ್ಷರಾದ ಖರ್ಗೆ
, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ ಹಾಗೂ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ತಾವೆಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಯಶಸ್ಸಿಗೆ ಕೈಜೋಡಿಸಬೇಕಾಗಿ ಕೋರುತ್ತೇವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read