BIG NEWS : ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಇಂದು ರಾಷ್ಟ್ರೀಯ ಯುವದಿನ ಈ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಾಷ್ಟ್ರೀಯ ಯುವದಿನದ ಶುಭಾಶಯ ಕೋರಿದ್ದಾರೆ.

ಶತಮಾನಗಳಿಂದ ಆಚರಣೆಯಲ್ಲಿದ್ದ ಅಸಮಾನತೆ, ಮೌಢ್ಯ, ಕಂದಾಚಾರಗಳನ್ನು ತೊಡೆದು ಧಾರ್ಮಿಕ ಹಾಗೂ ಸಾಮಾಜಿಕ ಸುಧಾರಣೆಗಾಗಿ ಶ್ರಮಿಸಿದ ಮಹಾನ್ ಸಂತ ಸ್ವಾಮಿ ವಿವೇಕಾನಂದರನ್ನು ಅವರ ಹುಟ್ಟುಹಬ್ಬದ ದಿನ ಗೌರವದಿಂದ ನೆನೆಯೋಣ. ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸದ ಮೂಲಕ ದೈಹಿಕ ಸವಾಲುಗಳನ್ನು ಮೆಟ್ಟಿನಿಂತು ಕಿರಿ ವಯಸ್ಸಿನಲ್ಲಿಯೇ ವಿಶ್ವ ತಲೆಬಾಗುವಂತಹ ಆಧ್ಯಾತ್ಮಿಕ ಗುರುವಾಗಿ ಬೆಳೆದ ಸ್ವಾಮಿ ವಿವೇಕಾನಂದರ ಬದುಕು ಮತ್ತು ಬರಹ ಯುವ ಸಮುದಾಯಕ್ಕೆ ಸದಾ ಸ್ಪೂರ್ತಿ. ನಾಡಿನ ಸಮಸ್ತ ಯುವ ಸಮುದಾಯಕ್ಕೆ ರಾಷ್ಟ್ರೀಯ ಯುವದಿನದ ಶುಭಾಶಯಗಳು.

ವಿವೇಕಾನಂದರನ್ನು ಆರಾಧನೆಗಷ್ಟೇ ಸೀಮಿತವಾಗಿಸದೆ ಅವರ ವಿಚಾರಗಳನ್ನು ಎಲ್ಲರೂ ಅಳವಡಿಸಿಕೊಳ್ಳುವ ಸಂಕಲ್ಪ ಮಾಡೋಣ, ಆ ಮೂಲಕ ದಿವ್ಯ ಚೇತನವನ್ನು ಗೌರವಿಸೋಣ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read