ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿ ಬಿ,ಎಂ. ಪಾರ್ವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಶ್ವಾಸಕೋಶದ ಸಮಸ್ಯೆಯಿಂದ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಿಢೀರ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಪಾರ್ವತಿ ಅವರಿಗೆ ವೈದ್ಯರು ಚಿಕಿತ್ಸೆ ನೀಡಿದ್ದು, ಚೇತರಿಸಿಕೊಳ್ಳುತ್ತಿದ್ದಾರೆ ಎನ್ನಲಾಗಿದೆ.
ಪ್ರಧಾನಿ ಮೋದಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಭೇಟಿಗಾಗಿ ಸಿಎಂ ಸಿದ್ದರಾಮಯ್ಯ ದೆಹಲಿಗೆ ತೆರಳಿದ್ದಾರೆ. ಈಗಾಗಲೇ ಮೋದಿ ಮತ್ತು ಖರ್ಗೆಯವರನ್ನು ಭೇಟಿಯಾಗಿರುವ ಸಿದ್ದರಾಮಯ್ಯ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.
