BREAKING : ಬಡ ಅಲೆಮಾರಿ ಕುಟುಂಬಕ್ಕೆ ಸೂರು ಒದಗಿಸಲು ಸ್ಥಳದಲ್ಲೇ ಕ್ರಮ ಕೈಗೊಂಡ ಸಿಎಂ |CM Janata Darshana

ಬೆಂಗಳೂರು : ಸಿಎಂ ಸಿದ್ದರಾಮಯ್ಯ ಅವರು ಇಂದು ಇಡೀ ದಿನ ಜನತಾ ದರ್ಶನ ಹಮ್ಮಿಕೊಂಡಿದ್ದು, ಜನರಿಗೆ ಸ್ಥಳದಲ್ಲೇ ಪರಿಹಾರ ಒದಗಿಸುತ್ತಿದ್ದಾರೆ.

ಹುಣಸೂರಿನ ಕಲ್ಲಹಳ್ಳಿ ಪಂಚಾಯ್ತಿಯ ಲಕ್ಷ್ಮೀಬಾಯಿ ಎನ್ನುವವರು ಅಲೆಮಾರಿ ಡೋಂಗ್ರಿ ಗೆರೆಸಿಯಾ ಸಮುದಾಯದವರಿಗೆ 40 ಮನೆಗಳು ಮಂಜೂರಾಗಿವೆ. ಇವರಿಗೆ ಮನೆ ಕಟ್ಟಲು ಮಂಜೂರಾತಿ ನೀಡುವಂತೆ ಜನತಾ ದರ್ಶನದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಳಿ ಮನವಿ ಮಾಡಿದರು.

ಮುಖ್ಯಮಂತ್ರಿಗಳು ಅಲೆಮಾರಿ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ (ಎಂ.ಡಿ) ಅವರನ್ನು ಕರೆದು, ಅರ್ಜಿಯನ್ನು ಸಮಗ್ರವಾಗಿ ಪರಿಶೀಲಿಸಿ, ಅಗತ್ಯ ಕ್ರಮ ವಹಿಸಿ ಆದಷ್ಟು ಶೀಘ್ರ ವರದಿ ನೀಡಬೇಕು ಎಂದು ಸೂಚಿಸುವ ಮೂಲಕ ಬಡ ಅಲೆಮಾರಿ ಕುಟುಂಬಗಳ ಸ್ವಂತ ಸೂರು ಹೊಂದುವ ಆಸೆಗಿದ್ದ ತೊಡಕನ್ನು ಸ್ಥಳದಲ್ಲೇ ಪರಿಹರಿಸಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read