ದಾವಣಗೆರೆ: ದಾವಣಗೆರೆಯಲ್ಲಿ ಫ್ಲೆಕ್ಸ್ ವಿಚಾರವಾಗಿ 2 ಗುಂಪುಗಳ ನಡುವೆ ಘರ್ಷಣೆ ನಡೆದಿದ್ದು, ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಘಟನೆಯಲ್ಲಿ ಕೆಲವರು ಗಾಯಗೊಂಡಿದ್ದು, ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹೆಚ್ಚಿನ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ದಾವಣಗೆರೆಯ ಕಾರ್ಲ್ ಮಾರ್ಕ್ಸ್ ನಗರದಲ್ಲಿ ಬುಧವಾರ ರಾತ್ರಿ ಫ್ಲೆಕ್ಸ್ ಹಾಕಿದ ವಿಚಾರಕ್ಕೆ ಎರಡು ಗುಂಪುಗಳ ನಡುವೆ ಗಲಾಟೆಯಾಗಿದೆ. ಎರಡು ಕೋಮಿನವರ ನಡುವೆ ಘರ್ಷಣೆಯಾಗಿ ಕಲ್ಲು ತೂರಾಟ ನಡೆಸಲಾಗಿದೆ. ಹಿಂದೂಗಳ ಮನೆಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು, ಗಾಯಗೊಂಡ ಅನೇಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಪ್ಲೆಕ್ಸ್ ವಿಚಾರವಾಗಿ 2 ಕೋಮಿನ ನಡುವೆ ಜಗಳವಾಗಿದೆ. ಕೂಡಲೇ ಪೊಲೀಸ್ ಸಿಬ್ಬಂದಿ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಯಾವುದೇ ತೊಂದರೆ ಇಲ್ಲ ಎಂದು ದಾವಣಗೆರೆ ಎಸ್ಪಿ ಉಮಾ ಪ್ರಶಾಂತ್ ಮಾಹಿತಿ ನೀಡಿದ್ದಾರೆ.