HomeLatest NewsBREAKING : ನಾಡಪ್ರಭು ʻಕೆಂಪೇಗೌಡರʼ ಬಗ್ಗೆ ಅವಹೇಳನಕಾರಿ ಪೋಸ್ಟ್ : ನಟ ಚೇತನ್ ಅಹಿಂಸಾ ವಿರುದ್ಧ...

BREAKING : ನಾಡಪ್ರಭು ʻಕೆಂಪೇಗೌಡರʼ ಬಗ್ಗೆ ಅವಹೇಳನಕಾರಿ ಪೋಸ್ಟ್ : ನಟ ಚೇತನ್ ಅಹಿಂಸಾ ವಿರುದ್ಧ ದೂರು ದಾಖಲು

ಬೆಂಗಳೂರು : ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದ ಹಿನ್ನೆಲೆಯಲ್ಲಿ ನಟ ಚೇತನ್‌ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ನಟ ಚೇತನ್‌ ಅಹಿಂಸಾ ಅವರು ಫೇಸ್‌ ಬುಕ್‌ ಪೇಜ್‌ ನಲ್ಲಿ ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಿ ಅಗೌರವ ತೋರಿದ್ದಾರೆ ಎಂದು ವಕೀಲ ಆರ್‌ ಎಲ್‌ ಎನ್‌ ಮೂರ್ತಿ ಎನ್ನುವವವರು ಶೇಷಾದ್ರಿಪುರಂ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಟ ಚೇತನ್‌ ಅಹಿಂಸಾ ಅವರು ತಮ್ಮ ಫೇಸ್‌ ಬುಕ್‌ ಪೇಜ್‌ ನಲ್ಲಿ ಹೀಗೆ ಬರೆದುಕೊಂಡಿದ್ದರು. ಇಬ್ಬರು ಯೋಧರ ಕಥೆ:

  1. ಕೆಂಪೇಗೌಡ — ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ.
  2. ಟಿಪ್ಪು ಸುಲ್ತಾನ್ — ಒಬ್ಬ ಐತಿಹಾಸಿಕವಾಗಿ ಬಹಳ ಮಹತ್ವದ ವ್ಯಕ್ತಿ, ಅವರ ಜನ್ಮವು ಮುಸ್ಲಿಮರಾಗಿ ಅವರ ಇಂದಿನ ಮಾನ್ಯತೆಗೆ ಅಡ್ಡಿಯಾಗಿದೆ.

ದುರದೃಷ್ಟವಶಾತ್, ಒಬ್ಬ ವ್ಯಕ್ತಿಯು ಹುಟ್ಟಿದ ಸಮುದಾಯಕ್ಕೆ ಅವನ/ಅವಳ ಸಾಮಾಜಿಕ ಕೊಡುಗೆಗಳಿಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ನೀಡಲಾಗುತ್ತದೆ  ಎಂದು ಪೋಸ್ಟ್‌ ಮಾಡಿದ್ದರು.

 

For Latest News Updates, Join Our Whatsapp Community🚩
RELATED ARTICLES

Most Popular