HomeKarnatakaBREAKING: ಸಮರ್ಥ್ ಮಲ್ಲಿಕಾರ್ಜುನ್, ಉಮೇಶ ಮೇಟಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

BREAKING: ಸಮರ್ಥ್ ಮಲ್ಲಿಕಾರ್ಜುನ್, ಉಮೇಶ ಮೇಟಿಗೆ ಕಾಂಗ್ರೆಸ್ ಟಿಕೆಟ್ ಘೋಷಣೆ

ಏಪ್ರಿಲ್ 9ರಂದು ನಡೆಯಲಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ  ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಮೇಶ್ ಮೇಟಿ ಮತ್ತು ದಾವಣಗೆರೆ ದಕ್ಷಿಣ ಕ್ಷೇತ್ರಕ್ಕೆ ಸಮರ್ಥ್ ಮಲ್ಲಿಕಾರ್ಜುನ್ ಅವರಿಗೆ ಟಿಕೆಟ್ ನೀಡಲಾಗಿದೆ. ನಾಮಪತ್ರ ಸಲ್ಲಿಕೆಗೆ ನಾಳೆ ಕೊನೆಯ ದಿನವಾಗಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್ ನಿಂದ ಅಭ್ಯರ್ಥಿಗಳ ಹೆಸರು ಅಧಿಕೃತವಾಗಿ ಪ್ರಕಟಿಸಲಾಗಿದೆ.

ನಿನ್ನೆಯೇ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಿ ಬಿ ಫಾರಂ ನೀಡಲಾಗಿದ್ದು, ಇಂದು ಎಐಸಿಸಿಯಿಂದ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದಾವಣಗೆರೆ ದಕ್ಷಿಣದಲ್ಲಿ ಶಾಮನೂರು ಕುಟುಂಬಕ್ಕೆ ಟಿಕೆಟ್ ನೀಡಬಾರದು, ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಬೇಕೆಂಬ ಒತ್ತಾಯ ಕೇಳಿ ಬಂದಿತ್ತು. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸರಣಿ ಸಭೆಗಳನ್ನು ನಡೆಸಿ, ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಅಂತಿಮಗೊಳಿಸಿದ್ದಾರೆ.

ಈ ಬಾರಿ ಅಲ್ಪಸಂಖ್ಯಾತ ಸಮುದಾಯ ಅಭ್ಯರ್ಥಿಗೆ ಟಿಕೆಟ್ ನೀಡಬೇಕೆಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಮುಖಂಡರು ಪಟ್ಟು ಹಿಡಿದಿದ್ದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾಗಿರುವ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೇರಿದಂತೆ ಹಲವು ನಾಯಕರು ಶಾಮನೂರು ಶಿವಶಂಕರಪ್ಪ ಪ್ರತಿನಿಧಿಸಿದ್ದ ಕ್ಷೇತ್ರದಲ್ಲಿ ಅವರ ಮೊಮ್ಮಗ ಸಮರ್ಥ್ ಗೆ ಟಿಕೆಟ್ ನೀಡಬೇಕೆಂದು ಪಟ್ಟು ಹಿಡಿದಿದ್ದರು.

ಹೀಗಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿತ್ತು. ಎರಡು ಗುಂಪುಗಳ ಪ್ರಮುಖರ ಸಭೆ ನಡೆಸಿದ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಮತ್ತು ಸುರ್ಜೇವಾಲಾ ಅಂತಿಮವಾಗಿ ಮುಸ್ಲಿಂ ಸಮುದಾಯದ ಮುಖಂಡರ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಾಗಲಕೋಟೆ ಕ್ಷೇತ್ರದಲ್ಲಿ ಹೆಚ್.ವೈ. ಮೇಟಿ ಪುತ್ರ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಮೇಟಿಯವರ ಕುಟುಂಬ ಸದಸ್ಯರ ನಡುವೆ ಟಿಕೆಟ್ ಗಾಗಿ ಪೈಪೋಟಿ ಇತ್ತು. ಸಿಎಂ ಮತ್ತು ಡಿಸಿಎಂ ಮೇಟಿ ಕುಟುಂಬದವರೊಂದಿಗೆ ಚರ್ಚಿಸಿ ಉಮೇಶ್ ಮೇಟಿಗೆ ಟಿಕೆಟ್ ನೀಡಲು ಅಂತಿಮಗೊಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular