BREAKING : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡ : H.D ಕುಮಾರಸ್ವಾಮಿ ಗಂಭೀರ ಆರೋಪ.!

ಮಂಡ್ಯ : ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಮಾಜಿ ಸಿಎಂ , ಹಾಗೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಇಂದು ನಾಗಮಂಗಲಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ನಂತರ   ಹೆಚ್ ಡಿ ಕುಮಾರಸ್ವಾಮಿ ಮಾತನಾಡಿದರು.   ಇದನ್ನು ನೋಡಿದ್ರೆ ಪೂರ್ವನಿಯೋಜಿತ ಕೃತ್ಯ ಎನಿಸುತ್ತದೆ. ಮಸೀದಿ ಬಳಿ 10 ನಿಮಿಷ ಡ್ಯಾನ್ಸ್ ಮಾಡಲು ಬಿಟ್ಟವರು ಯಾರು..? ಪೊಲೀಸರು ಏನು ಮಾಡುತ್ತಿದ್ದರು..? ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಬೇಕಿತ್ತು. ಡಾ.ಪರಮೇಶ್ವರ್ ಅವರು ಇದನ್ನು ಸಣ್ಣ ಘಟನೆ ಎಂದು ಹೇಳುತ್ತಾರೆ. ಇದನ್ನು ನೋಡಿದರೆ ನಾಗಮಂಗಲದ ಗಲಭೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಅನಿಸುತ್ತದೆ ಎಂದು ಹೇಳಿದರು.

ಪೊಲೀಸರ ವೈಫಲ್ಯ

ಶಾಂತಿಯುತವಾಗಿ ತೆರಳುತ್ತಿದ್ದ ಭಕ್ತರನ್ನು ಗುರಿ ಮಾಡಿ ಒಂದು ಸಮುದಾಯದ ಪುಂಡರು ಉದ್ದೇಶಪೂರ್ವಕವಾಗಿಯೇ ದಾಂಧಲೆ ಎಬ್ಬಿಸಿ ಸಾರ್ವಜನಿಕರು-ಪೊಲೀಸರ ಮೇಲೆ ಕಲ್ಲು, ಚಪ್ಪಲಿ ಎಸೆದು ಪೆಟ್ರೋಲ್ ಬಾಂಬ್ ಸ್ಫೋಟಿಸಿ ತಲ್ವಾರ್ ಝಳಪಿಸುವ ದುಸ್ಸಾಹಸಕ್ಕೆ ಕೈ ಹಾಕಿರುವುದು ಪಟ್ಟಣದಲ್ಲಿ ಶಾಂತಿ ಸುವ್ಯವಸ್ಥೆ ವೈಫಲ್ಯವಾಗಿರುವುದಕ್ಕೆ ಸಾಕ್ಷಿ. ಪೊಲೀಸ್ ಠಾಣೆ ಎದುರು ರಕ್ಷಣೆ ಕೊಡಿ ಎಂದು ಶಾಂತಿಯುತವಾಗಿ ಪ್ರತಿಭಟಿಸುತ್ತಿದ್ದವರ ಮೇಲೆಯೇ ಆ ಕೋಮಿನ ಪುಂಡರು ದಬ್ಬಾಳಿಕೆ ನಡೆಸುತ್ತಾರೆ ಎಂದರೆ ನಾವು ಎಲ್ಲಿದ್ದೇವೆ ಎನ್ನುವ ಅನುಮಾನ ಬರುತ್ತದೆ. ಇಲ್ಲಿ ಸ್ಥಳೀಯ ಪೊಲೀಸರ ವೈಫಲ್ಯವೂ ಎದ್ದು ಕಾಣುತ್ತಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read