ಕೋಲಾರ : ಕೋಲಾರದಲ್ಲಿ ಇಂದು ಕಾಂಗ್ರೆಸ್ ಚುನಾವಣಾ ರಣಕಹಳೆ ಮೊಳಗಿಸಿದ್ದು, ಪ್ರಜಾಧ್ವನಿ 2.O ಪ್ರಚಾರಕ್ಕೆ ಕಾಂಗ್ರೆಸ್ ಚಾಲನೆ ನೀಡಿದೆ.
ಕೋಲಾರದ ಮುಳಬಾಗಿಲು ತಾಲೂಕಿನ ಕುರುಡುಮಲೆ ವಿನಾಯಕ ದೇವಸ್ಥಾನದಿಂದ ಪ್ರಚಾರಕ್ಕೆ ಅಧಿಕೃತ ಜಾಲನೆ ಸಿಕ್ಕಿದೆ. ಕೋಲಾರದ ಮುಳಬಾಗಿಲು ಬಳಿ ಇರೋ ಕುರುಡುಮಲೆ ವಿನಾಯಕ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಚಾಲನೆ ನೀಡಲಾಗಿದ್ದು , ನಂತರ ಭರ್ಜರಿ ರೋಡ್ ಶೋ ನಡೆಸಲಾಗಿದೆ.
ತೆರೆದ ವಾಹನದಲ್ಲಿ ಅಂಬೇಡ್ಕರ್ ವೃತ್ತದಿಂದ ಸೌಂದರ್ಯ ಸರ್ಕಲ್ವರೆಗೆ ಭರ್ಜರಿ ರೋಡ್ ಶೋ ನಡೆಸಿದ ಸಿದ್ದರಾಮಯ್ಯ ಹಾಗೂ ಡಿಕೆ, ಶಿವಕುಮಾರ್ ಕಾಂಗ್ರೆಸ್ ಅಭ್ಯರ್ಥಿ ಗೌತಮ್ ಪರ ಮತಯಾಚಿಸಿದರು. ಬಿಜೆಪಿಯವರು ಸುಳ್ಳಿನ ಮೇಲೆ ಪ್ರಚಾರ ಮಾಡ್ತಿದ್ದಾರೆ. ನಾವು ಸತ್ಯದ ಮೇಲೆ ಪ್ರಚಾರ ಮಾಡ್ತಿದ್ದೇವೆ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಈ ಬಾರಿಯ ಚುನಾವಣಾ ಪ್ರಚಾರ ವೈಖರಿ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಬಿಜೆಪಿ ಸುಳ್ಳುಗಳ ಮೇಲೆ ಪ್ರಚಾರ ಮಾಡುತ್ತಿದೆ. ನಾವು ಸತ್ಯದ ಮೇಲೆ ಪ್ರಚಾರ ಮಾಡುತ್ತೇವೆ. ಕಾಂಗ್ರೆಸ್ ಸತ್ಯವನ್ನೇ ಆಧಾರವಾಗಿಟ್ಟುಕೊಂಡು ಪ್ರಚಾರ ನಡೆಸಲಿದೆ ಎಂದು ಹೇಳಿದರು.
ಇತಿಹಾಸ ಪ್ರಸಿದ್ಧ ಕೋಲಾರದ ಮುಳಬಾಗಿಲಿನ ಕುರುಡುಮಲೆ ಗಣಪತಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿ, ನಾಡಿನಲ್ಲಿ ಮಳೆ – ಬೆಳೆ ಸಮೃದ್ಧವಾಗಲಿ, ಜನರ ಬದುಕು ಹಸನಾಗಲಿ ಎಂದು ಪ್ರಾರ್ಥಿಸಿದೆ.
ಡಿಸಿಎಂ @DKShivakumar, ಸಚಿವರಾದ ಎಂ.ಸಿ.ಸುಧಾಕರ್, @byrathi_suresh ಸೇರಿ ಕೋಲಾರ ಜಿಲ್ಲೆಯ ಶಾಸಕರುಗಳು ಮತ್ತು ಮುಖಂಡರು ಈ ಸಂದರ್ಭದಲ್ಲಿ… pic.twitter.com/vPV12f7dCS
— Siddaramaiah (@siddaramaiah) April 6, 2024

