ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ಹೋಗದಿರಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ.
ಅಯೋಧ್ಯೆ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದಿಂದ ಯಾರೂ ಕೂಡ ಭಾಗಿಯಾಗೋದಿಲ್ಲ ಎಂದು ತಿಳಿಸಿದೆ. ಈ ಕುರಿತಾಗಿ ಬುಧವಾರ ಅಧಿಕೃತವಾಗಿ ತಿಳಿಸಿದೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಈ ಆಹ್ವಾನವನ್ನು ಗೌರವಯುತವಾಗಿ ತಿರಸ್ಕರಿಸಿದ್ದಾರೆ.
ಜ.22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ಆಹ್ವಾನವನ್ನು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಶ್ರೀರಾಮನನ್ನು ಆರ್ ಎಸ್ ಎಸ್ ಹಾಗೂ ಬಿಜೆಪಿ ಚುನಾವಣಾ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ. ನಾವು ಗೌರವಪೂರ್ವಕವಾಗಿ ಆಹ್ವಾನ ತಿರಸ್ಕರಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.
https://twitter.com/INCIndia/status/1745034149457477811?ref_src=twsrc%5Etfw%7Ctwcamp%5Etweetembed%7Ctwterm%5E1745034149457477811%7Ctwgr%5E45578cb95d831e0af642021c58e8939d174a3498%7Ctwcon%5Es1_&ref_url=https%3A%2F%2Fstatic.asianetnews.com%2Ftwitter-iframe%2Fshow.html%3Furl%3Dhttps%3A%2F%2Ftwitter.com%2FINCIndia%2Fstatus%2F1745034149457477811%3Fref_src%3Dtwsrc5Etfw