ಬೆಂಗಳೂರು: ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಶಾಸಕರು ಆಗಮಸಿದ್ದಾರೆ.
ವಿದೇಶ ಪ್ರವಾಸ ಮುಗಿಸಿ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಆಗಮಿಸಿದ್ದು, ಕೆಲವರು ಮಾಧ್ಯಮದವರ ಕಣ್ಣು ತಪ್ಪಿಸಿ ತೆರಳಿದ್ದಾರೆ.
ವಿದೇಶ ಪ್ರವಾಸಕ್ಕೆ ತೆರಳಿದ್ದ ಕಾಂಗ್ರೆಸ್ ಶಾಸಕರಾದ ಹೆಚ್.ಡಿ. ತಮ್ಮಯ್ಯ, ದೇವೇಂದ್ರಪ್ಪ, ಪುಟ್ಟರಂಗಶೆಟ್ಟಿ, ಬಿ.ಎಂ. ನಾಗರಾಜ್ ಸೇರಿ ಹಲವರು ವಾಪಸ್ ಆಗಿದ್ದಾರೆ. ಅವರನ್ನು ಬೆಂಬಲಿಗರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.
ಅಧ್ಯಯನ ಮಾಡಲು ವಿದೇಶ ಪ್ರವಾಸಕ್ಕೆ ಹೋಗಿದ್ದೆವು. ಅಧ್ಯಯನದಿಂದ ಸಾಕಷ್ಟು ಕಲಿತಿದ್ದೇವೆ ಎಂದು ಶಾಸಕ ದೇವೇಂದ್ರಪ್ಪ ಹೇಳಿದ್ದು, ಅವುಗಳನ್ನು ನಮ್ಮ ದೇಶದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಏನೂ ಚರ್ಚೆ ಆಗಿಲ್ಲ, ಚರ್ಚೆಗೆ ಏನು ವಿಷಯ ಇತ್ತು? ಅಧ್ಯಯನ ಎಲ್ಲಾ ಸುಳ್ಳು ಮಾಹಿತಿ ಎಂದು ಬಿ.ಎಂ. ನಾಗರಾಜ್ ಹೇಳಿದ್ದಾರೆ.

