HomeKarnatakaBREAKING: ಬೆಂಗಳೂರು ದಕ್ಷಿಣದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್

BREAKING: ಬೆಂಗಳೂರು ದಕ್ಷಿಣದಲ್ಲೇ 2ನೇ ವಿಮಾನ ನಿಲ್ದಾಣ ನಿರ್ಮಾಣ: ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಬೆಂಗಳೂರಿನ ಸಮೀಪದಲ್ಲಿ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ ಮಾಡುವ ವಿಷಯಕ್ಕೆ ಸಂಬಂಧಿಸಿದಂತೆ ಇಂದು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಉನ್ನತ ಮಟ್ಟದ ಸಭೆ ನಡೆಸಿದರು.

ರಾಜಧಾನಿ ಬೆಂಗಳೂರಿನ ಭವಿಷ್ಯದ ಅಗತ್ಯಗಳನ್ನು ಗಮನದಲ್ಲಿರಿಸಿಕೊಂಡು, ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣದ ಪ್ರಗತಿ ಕುರಿತು ಪರಿಶೀಲನಾ ಸಭೆ ನಡೆಸಲಾಯಿತು.

ಸಭೆಯಲ್ಲಿ ಸಚಿವ ಎಂ. ಬಿ. ಪಾಟೀಲ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಆರ್ಥಿಕ ಸಲಹೆಗಾರ ಎಲ್. ಕೆ.ಅತೀಕ್, ಹಣಕಾಸು ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್, ಮುಖ್ಯ ಮಂತ್ರಿಯವರ ಹೆಚ್ಚುವರಿ ಮುಖ್ಯಕಾರ್ಯದರ್ಶಿ ತುಷಾರ್ ಗಿರಿನಾಥ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಡಾ.ವಿಶಾಲ್, KSIIDC ವ್ಯವಸ್ಥಾಪಕ ನಿರ್ದೇಶಕಿ ಖುಷ್ಬು ಗೋಯಲ್ ಮೊದಲಾದವರು ಉಪಸ್ಥಿತರಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಕುರಿತಾಗಿ ಮಾತನಾಡಿದ ಸಿಎಂ ಡಿ.ಕೆ. ಶಿವಕುಮಾರ್, ಎರಡನೇ ವಿಮಾನ ನಿಲ್ದಾಣ ಬಗ್ಗೆ ಅಧಿಕಾರಿಗಳ ಜೊತೆಗೆ ಸಭೆ ನಡೆಸಲಾಗಿದೆ. ವಿಮಾನ ನಿಲ್ದಾಣ ನಿರ್ಮಾಣಕ್ಕೆ ಭೂಮಿಯ ದರ ಕಡಿಮೆ ಇರಬೇಕು. ಒಂದು ಮನೆ ಇದ್ದರೆ ಪರವಾಗಿಲ್ಲ, ಅವರಿಗೆ ಪರಿಹಾರ ಕೊಡಬೇಕು. ಆದರೆ ಹೆಚ್ಚು ಊರು, ಮನೆ ಇರುವ ಕಡೆ ಬೇಡವೆಂದು ಹೇಳಿದ್ದೇವೆ ಎಂದು ತಿಳಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿಯೇ 2ನೇ ಏರ್ಪೋರ್ಟ್ ಮಾಡಲಾಗುವುದು. ಅತಿ ಹೆಚ್ಚು ಜನ, ವಸತಿ ಪ್ರದೇಶ ಹೊರತುಪಡಿಸಿ ಖಾಲಿ ಜಾಗ ಗುರುತಿಸಲಾಗುವುದು. ಎರಡನೇ ವಿಮಾನ ನಿಲ್ದಾಣಕ್ಕೆ ಯಾವುದೇ ಜಾಗ ಅಂತಿಮವಾಗಿಲ್ಲ. ಕಾರ್ಯಾಧ್ಯತೆ ಇರುವಲ್ಲಿ ಎರಡನೇ ವಿಮಾನ ನಿಲ್ದಾಣ ಮಾಡಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular