HomeLatest NewsBREAKING: ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೇನರ್: ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಗಂಭೀರ,...

BREAKING: ಸಿಕ್ಕ ಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಕಂಟೇನರ್: ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಗಂಭೀರ, 20ಕ್ಕೂ ಅಧಿಕ ವಾಹನಗಳಿಗೆ ಹಾನಿ

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ ಆನೇಕಲ್ ಬಳಿ ಸರಣಿ ಅಪಘಾತ ಸಂಭವಿಸಿದೆ. ಸಿಕ್ಕಸಿಕ್ಕ ವಾಹನಗಳಿಗೆ ಕಂಟೇನರ್ ವಾಹನ ಡಿಕ್ಕಿ ಹೊಡೆದಿದೆ.

ಇಪ್ಪತ್ತಕ್ಕೂ ಹೆಚ್ಚು ವಾಹನಗಳಿಗೆ ಕಂಟೇನರ್ ಚಾಲಕ ಡಿಕ್ಕಿ ಹೊಡೆದು ಪರಾರಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆನೇಕಲ್ ಸಮೀಪದ ಬೆಸ್ತಮಾನ ಹಳ್ಳಿಯಿಂದ ಚಂದಾಪುರದವರೆಗೆ ಅಪಘಾತ ಸಂಭವಿಸಿದೆ. ಪೊಲೀಸರು 14 ಕಿಲೋ ಮೀಟರ್ ಹಿಂಬಾಲಿಸಿದರೂ ಕಂಟೇನರ್ ನಿಲ್ಲಿಸದೆ ಚಾಲಕ ಪರಾರಿಯಾಗಿದ್ದಾನೆ.

ಚಂದಾಪುರದಲ್ಲಿ ಸಾರ್ವಜನಿಕರು ಕಲ್ಲು ತೂರಾಟ ನಡೆಸಿದಾಗ ಚಾಲಕ ಕಂಟೇನರ್ ನಿಲ್ಲಿಸಿದ್ದಾನೆ. ಚಾಲಕನನ್ನು ಹೊರಗೆಳೆದು ಸಾರ್ವಜನಿಕರು ಥಳಿಸಿದ್ದಾರೆ. ಪೊಲೀಸರು ಮಧ್ಯ ಪ್ರವೇಶಿಸಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕುಡಿದ ನಶೆಯಲ್ಲಿ ಕಂಟೇನರ್ ಚಾಲಕ ಭೀಕರ ಸರಣಿ ಅಪಘಾತ ನಡೆಸಿದ್ದಾನೆ/ ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular