BREAKING: ಮುಂದುವರೆದ ಮಳೆ ಅಬ್ಬರ: ಇಂದು ಈ ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳಿಗೆ ರಜೆ ಘೋಷಣೆ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ಇಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ವೆಂಕಟರಾಜ ಆದೇಶ ಹೊರಡಿಸಿದ್ದಾರೆ.

ಭಾರಿ ಮಳೆಯ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಶಾಲಾ, ಕಾಲೇಜುಗಳಿಗೆ ರಜೆ ನೀಡಲಾಗಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಮುಂಜಾಗ್ರತಾ ದೃಷ್ಟಿಯಿಂದ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ & ಪ್ರೌಢ ಶಾಲೆಗಳಿಗೆ ದಿನಾಂಕ:07.07.2025ರ ರಜೆ ಘೋಷಿಸಿದೆ. ಸದರಿ ರಜಾ ಅವಧಿಯ ಶೈಕ್ಷಣಿಕ ಪಠ್ಯಗಳನ್ನು ಮುಂದಿನ ರಜೆಯ ದಿನದಲ್ಲಿ ಸರಿಹೊಂದಿಸಿಕೊಳ್ಳಲು ಸಂಬಂಧಿತ ಶಾಲಾ ಮುಖ್ಯಸ್ಥರುಗಳಿಗೆ ತಿಳಿಸಿದೆ.

Share This Article

Latest News

ಇದೇ ಅವಧಿಯಲ್ಲಿ ಮುಖ್ಯಮಂತ್ರಿಯಾಗಲಿದ್ದಾರಾ ಡಿ.ಕೆ. ಶಿವಕುಮಾರ್‌ ?

View Results

Loading ... Loading ...

Most Read