ಬೆಂಗಳೂರು: ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ಲಂಚ ಸ್ವೀಕರಿಸುತ್ತಿದ್ದ ಬೆಸ್ಕಾಂ ಎಇಇ ಮತ್ತು ಜೆಇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಲಂಚ ಪಡೆಯುವಾಗಲೇ ಭ್ರಷ್ಟ ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಬೆಂಗಳೂರಿನ ಹುಳಿಮಾವು ಬೆಸ್ಕಾಂ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ನಾಗರತ್ನ ಮತ್ತು ಸ್ವಾಮಿ ಅವರು ಹೊಸ ಕಟ್ಟಡಕ್ಕೆ ವಿದ್ಯುತ್ ಸಂಪರ್ಕ ನೀಡಲು ಲಂಚ ಸ್ವೀಕರಿಸುತ್ತಿದ್ದರು.
1.50 ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಗುತ್ತಿಗೆದಾರ ಅರ್ಷದ್ ವುಲ್ಲಾ ದೂರಿನ ಅನ್ವಯ ದಾಳಿ ನಡೆಸಲಾಗಿದೆ. ಬೆಸ್ಕಾಂ ಅಧಿಕಾರಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

