BREAKING : ರಾಮಾಪುರದ ನಿರ್ಜನ ಪ್ರದೇಶದಲ್ಲಿ ಸಿ.ಪಿ ಯೋಗೇಶ್ವರ್ ಬಾವ ‘ಮಹದೇವಯ್ಯ’ ಶವವಾಗಿ ಪತ್ತೆ

ಚಾಮರಾಜನಗರ : ಕೊಲೆಯಾದ ಸ್ಥಿತಿಯಲ್ಲಿ ಸಿ.ಪಿ ಯೋಗೇಶ್ವರ್ ಬಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಶವ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದೆ.

ಚಾಮರಾಜನಗರದ ಹನೂರು ತಾಲೂಕಿನ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಯೋಗೇಶ್ವರ್ ಬಾವ ಮಹದೇವಯ್ಯ ಶವ ಪತ್ತೆಯಾಗಿದ್ದು, ಅವರನ್ನು ಕೊಲೆ ಮಾಡಿ ದುಷ್ಕರ್ಮಿಗಳು ಶವ ಎಸೆದಿದ್ದಾರೆ.

ಪತ್ತೆಯಾದ ಕಾರಿನಲ್ಲಿ ರಕ್ತದ ಕಲೆ ಇರುವ ಹಿನ್ನೆಲೆ ದುಷ್ಕರ್ಮಿಗಳು ಯೋಗೇಶ್ವರ್ ಬಾವ ಅವರನ್ನು ಹತ್ಯೆ ಮಾಡಿದ್ದಾರೆ ಎಂದು ಶಂಕಿಸಲಾಗಿತ್ತು, ನಂತರ ಚಾಮರಾಜನಗರದ ದಟ್ಟಾರಣ್ಯದಲ್ಲಿ ಪೊಲೀಸರು ಕೂಂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದಟ್ಟಾರಣ್ಯದಲ್ಲಿ ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿಗಳು ತಪಾಸಣೆ ನಡೆಸುತ್ತಿದ್ದರು. ಇದೀಗ ಯೋಗೇಶ್ವರ್ ಬಾವ ಮಹದೇವಯ್ಯ ಶವ ರಾಮಾಪುರದ ನಿರ್ಜನ ಪ್ರದೇಶದಲ್ಲಿ ಪತ್ತೆಯಾಗಿದ್ದು, ದುಷ್ಕರ್ಮಿಗಳು ಅವರನ್ನು ಹತ್ಯೆ ಮಾಡಿ ಶವವನ್ನು ಎಸೆದು ಎಸ್ಕೇಪ್ ಆಗಿದ್ದಾರೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಲ್ಲಿ ತಂಗಿದ್ದ 62 ವರ್ಷದ ಮಹದೇವಯ್ಯ ಅವರು ಏಕಾಏಕಿ ನಾಪತ್ತೆಯಾಗಿದ್ದರು. ಉದ್ಯಮಿ ಹಾಗೂ ಮೆಗಾಸಿಟಿ ನಿರ್ದೇಶಕರಾಗಿರುವ ಮಹದೇವಯ್ಯ ಅವರು ಆಗಾಗ ತೋಟದ ಮನೆಗೆ ಬಂದು ತಂಗುತ್ತಿದ್ದರು. ಮಹದೇಶ್ವರ ಬೆಟ್ಟದಲ್ಲಿ ಟವರ್ ಲೊಕೇಶನ್ ಟ್ರೇಸ್ ಆದ ಹಿನ್ನೆಲೆ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read