HomeIndiaBREAKING : ಸಿಪಿಐ (ಎಂ) ಹಿರಿಯ ನಾಯಕ ‘ಸೀತಾರಾಮ್ ಯೆಚೂರಿ’ ಇನ್ನಿಲ್ಲ |Sitaram Yechury No...

BREAKING : ಸಿಪಿಐ (ಎಂ) ಹಿರಿಯ ನಾಯಕ ‘ಸೀತಾರಾಮ್ ಯೆಚೂರಿ’ ಇನ್ನಿಲ್ಲ |Sitaram Yechury No more

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ದೆಹಲಿಯ ಏಮ್ಸ್ ಗೆ ದಾಖಲಾಗಿದ್ದ ಸಿಪಿಐ (ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ಗುರುವಾರ ನಿಧನರಾದರು ಎಂದು ಪಕ್ಷ ಮತ್ತು ಆಸ್ಪತ್ರೆ ಮೂಲಗಳನ್ನು ಉಲ್ಲೇಖಿಸಿ ವರದಿಯೊಂದು ತಿಳಿಸಿದೆ.

ಅವರು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ನಲ್ಲಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತೀವ್ರ ನಿಗಾ ಘಟಕದಲ್ಲಿ (ಐಸಿಯು) ತೀವ್ರ ಉಸಿರಾಟದ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆಗಾಗಿ ಸೀತಾರಾಮ್ ಯೆಚೂರಿ ಅವರನ್ನು ಆಗಸ್ಟ್ 19 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅವರು ಇಂದು ವಿಧಿವಶರಾಗಿದ್ದಾರೆ ಎಂದು ತಿಳಿದು ಬಂದಿದೆ.

 

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular