ಬೆಂಗಳೂರು: ಬೆಂಗಳೂರಿನ ಪಿಜಿಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು ಓರ್ವ ಸಾವನ್ನಪ್ಪಿದ್ದಾರೆ. ಕುಂದಲಹಳ್ಳಿ ಕಾಲೋನಿಯ ಪಿಜಿಯೊಂದರಲ್ಲಿ ಘಟನೆ ನಡೆದಿದೆ.
ಅರವಿಂದ್(23) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ದೇವಿ, ವಿಶಾಲ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ವೆಂಕಟೇಶ್ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹೆಚ್.ಎ.ಎಲ್. ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

