HomeLatest NewsBREAKING: ಡಿ.ಕೆ. ಶಿವಕುಮಾರ್ ಗೆ ಉನ್ನತ ಸ್ಥಾನ ಸಿಗಬೇಕು: ಮುಖ್ಯಮಂತ್ರಿಯಾಗಲೆಂದು ಪರೋಕ್ಷವಾಗಿ ಆಶೀರ್ವದಿಸಿದ ರಂಭಾಪುರಿ ಶ್ರೀ

BREAKING: ಡಿ.ಕೆ. ಶಿವಕುಮಾರ್ ಗೆ ಉನ್ನತ ಸ್ಥಾನ ಸಿಗಬೇಕು: ಮುಖ್ಯಮಂತ್ರಿಯಾಗಲೆಂದು ಪರೋಕ್ಷವಾಗಿ ಆಶೀರ್ವದಿಸಿದ ರಂಭಾಪುರಿ ಶ್ರೀ

ಬೆಂಗಳೂರು: ಜನರು ಡಿ.ಕೆ. ಶಿವಕುಮಾರ್ ಅವರನ್ನು ಉನ್ನತ ಸ್ಥಾನದಲ್ಲಿ ನೋಡುವಂತಹ ಭಾಗ್ಯ ಸಿಗಲಿ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ.

ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಬೆಜ್ಜವಳ್ಳಿ ಗ್ರಾಮದಲ್ಲಿ ಮಾತನಾಡಿದ ರಂಭಾಪುರಿ ಶ್ರೀಗಳು, ಕಾಂಗ್ರೆಸ್ ಗೆ ಹೆಚ್ಚು ಶಕ್ತಿ ತಂದು ಕೊಟ್ಟಿದ್ದು ಡಿ.ಕೆ. ಶಿವಕುಮಾರ್. ಅವರಿಗೆ ಉನ್ನತ ಸ್ಥಾನ ಸಿಗಬೇಕಿತ್ತು. ವರಿಷ್ಠರ ಸಮ್ಮುಖದಲ್ಲಿ ನಡೆದ ಮಾತಿನಂತೆ ಮುಂದೆ ಅವಕಾಶ ಕಲ್ಪಿಸಬೇಕು ಎಂದು ಡಿಕೆ ಮುಖ್ಯಮಂತ್ರಿ ಆಗಲಿ ಎಂದು ಪರೋಕ್ಷವಾಗಿ ಆಶೀರ್ವದಿಸಿದ್ದಾರೆ.

ಡಿ.ಕೆ. ಶಿವಕುಮಾರ್ ಮುಂದೆ ಗಟ್ಟಿ ನಿರ್ಧಾರ ಕೈಗೊಳ್ಳಬಹುದೆಂಬ ನಂಬಿಕೆ ಇದೆ. ಅವರು ದೇವರು, ಧರ್ಮ, ಗುರುಗಳಲ್ಲಿ ಅಪಾರ ನಂಬಿಕೆ ಇಟ್ಟಿದ್ದಾರೆ. ಅವರ ಮಾತಿನಲ್ಲಿ ಲೌಕಿಕ ಹಾಗೂ ಆಧ್ಯಾತ್ಮದ ತಿರುಳು ಇದೆ. ಹಲವು ರಾಜಕಾರಣಿಗಳ ಬಾಯಲ್ಲಿ ಇಂತಹ ಮಾತು ಬರುವುದು ಕಷ್ಟ ಎಂದು ರಂಭಾಪುರಿ ಶ್ರೀಗಳು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular