ಬೆಂಗಳೂರು : ಡಿಸೆಂಬರ್ 18 ರಂದು ರಾಜ್ಯ ಸರ್ಕಾರದ ಮಹತ್ವದ ಸಚಿವ ಸಂಪುಟ ಸಭೆ ನಿಗದಿಯಾಗಿದೆ.
2025 ಸಾಲಿನ 30ನೇ ಸಭೆಯನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ 3ನೇ ಮಹಡಿಯಲ್ಲಿರುವ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ. ಸಭೆಯ ಕಾರ್ಯಸೂಚಿಯನ್ನು ಪ್ರತ್ಯೇಕವಾಗಿ ಕಳುಹಿಸಲಾಗುವುದು ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.


