HomeKarnatakaBREAKING : ವರಮಹಾಲಕ್ಷ್ಮಿ ಹಬ್ಬದಂದೇ ಮಾಧ್ಯಮಗಳಿಗೆ ಕ್ಷಮೆ ಕೋರಿದ ನಟ ದರ್ಶನ್...!

BREAKING : ವರಮಹಾಲಕ್ಷ್ಮಿ ಹಬ್ಬದಂದೇ ಮಾಧ್ಯಮಗಳಿಗೆ ಕ್ಷಮೆ ಕೋರಿದ ನಟ ದರ್ಶನ್…!

ಬೆಂಗಳೂರು : ವರಮಹಾಲಕ್ಷ್ಮೀಹಬ್ಬದಂದೇ ಮಾಧ್ಯಮಗಳಿಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕ್ಷಮೆ ಕೋರಿ, ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಟ ದರ್ಶನ್ ಅವರು, ಸಮಸ್ತ ಕರ್ನಾಟಕ ಜನತೆಗೆ ನನ್ನ ಸೆಲೆಬ್ರಿಟಿಗಳಿಗೆ ಹಾಗೂ ಹಿರಿಯ ಪತ್ರಕರ್ತರಿಗೆ, ಮಾಧ್ಯಮ ಮಿತ್ರರಿಗೆ ವರಮಹಾಲಕ್ಷ್ಮಿ ಹಬ್ಬದ ಹಾರ್ದಿಕ ಶುಭಾಶಯಗಳು

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಸುಮಾರು ಎರಡು ವರ್ಷಗಳಿಂದ ನನ್ನ ಹಾಗೂ ಕನ್ನಡ ಮಾಧ್ಯಮ ಮಿತ್ರರ ನಡುವೆ ಒಂದು ಕಂದಕ ಉಂಟಾಗಿತ್ತು. ಈ ವರಮಹಾಲಕ್ಷ್ಮಿ ಹಬ್ಬದ ಮುನ್ನಾ ದಿನ, ಮಿತ್ರ ರಾಕ್ ಲೈನ್ ವೆಂಕಟಕೇಶ್ ನೇತೃತ್ವದಲ್ಲಿ ನನ್ನ ಹಾಗೂ ಕನ್ನಡದ ಪ್ರಮುಖ ಮಾಧ್ಯಮಗಳ ಸಂಪಾದಕರ ನಡುವೆ ಮಾತುಕತೆ ನಡೆದು ಇಡೀ ಪ್ರಕರಣ ಸುಖಾಂತ್ಯಗೊಂಡಿದೆ.

ಕೆಲ ವರ್ಷಗಳ ಹಿಂದಿನ ನನ್ನ ಆಡಿಯೋ ಒಂದು ದುರುದ್ದೇಶಪೂರ್ವಕವಾಗಿ ವೈರಲ್ ಆಗಿ ಇಡೀ ವಿವಾದಕ್ಕೆ ಕಾರಣವಾಗಿತ್ತು. ಅದು ಯಾವುದೋ ವಿಷಮ ಘಳಿಗೆಯಲ್ಲಿ ಒಬ್ಬ ವ್ಯಕ್ತಿಯ ಮಾತಿಗೆ ಪ್ರತಿಕ್ರಿಯೆಯಾಗಿತ್ತು. ಅದು ಮಾಧ್ಯಮದ ಇತರ ವ್ಯಕ್ತಿಗಳನ್ನು ಕುರಿತು ಆಡಿದ ಮಾತಾಗಿರಲಿಲ್ಲ. ಆ ವ್ಯಕ್ತಿ ಯಾವ ದುರುದ್ದೇಶದಿಂದ ಮಾಡಿದರು ಗೊತ್ತಿಲ್ಲ ಆದರೂ ಆ ವ್ಯಕ್ತಿಗೆ ಒಳ್ಳೆಯದಾಗಲಿ ಮುಂದೆ ಆ ವ್ಯಕ್ತಿ ಈರೀತಿಯ ದುರುದ್ದೇಶವನ್ನು ಮರುಕಳಿಸದಿರಲಿ,

ಆದರೂ ಅಂತಹ ಮಾತಿನಿಂದ ನೋವುಂಟಾಗಿದ್ದರೆ ಮಾಧ್ಯಮದ ಹಿರಿಯರಿಗೆ ಕ್ಷಮೆ ಕೋರುವುದರಲ್ಲಿ ತಪ್ಪಿಲ್ಲ. ಈ ಅಯಾಚಿತ ಘಟನೆಗೆ ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ರಂಗದ ಕ್ಷಮೆ ಇರಲಿ. ಒಂದು ಉತ್ತಮವಾದ ಸಮಾಜಕ್ಕೆ ಒಳ್ಳೆಯ ಮಾಧ್ಯಮಗಳ ಅಗತ್ಯವಿದೆ. ನನಗೂ ಮಾಧ್ಯಮಗಳ ಬಗ್ಗೆ, ಗೌರವವಿದೆ. ಚಿತ್ರರಂಗದ ನನ್ನ ಬೆಳವಣಿಗೆಯಲ್ಲಿ ಮಾಧ್ಯಮಗಳು ಪ್ರೀತಿಯಿಂದ ನೀಡಿದ ಪುಚಾರದ ಪಾಲೂ ಸಾಕಷ್ಟಿದ ಈ ಹಿಂದೆ ಆಗಿರುವ ಕಹಿ ಘಟನೆಯನ್ನು ಮರೆತು ನಾವೆಲ್ಲ ಮುಂದೆ ಸಾಗೋಣ. ಕನ್ನಡ, ಕನ್ನಡಿಗರು, ಕನ್ನಡ ನೆಲ ಜಲ, ಕನ್ನಡ ಚಿತ್ರರಂಗದ ಪ್ರಗತಿಗೆ ಜೊತೆಯಾಗಿ ಕೆಲಸ ಮಾಡೋಣ, ಪ್ರೀತಿಯಿರಲಿ, ನನ್ನ ಪ್ರೀತಿಯ ಸೆಲಬ್ರಿಟಿಗಳು ನನ್ನ ಭಾವನೆಯನ್ನು ಗೌರವಿಸುತ್ತಾರೆ ಎಂದು ಭಾವಿಸುತ್ತೇನೆ. ಪ್ರೀತಿಯಂದ ದರ್ಶನ್ ತೂಗೂದೀಪ..

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular