ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಪಡಿಸಿದ ಬೆನ್ನಲ್ಲೇ ಬಂಧಿಸಲಾಗಿದೆ.
ದರ್ಶನ್, ಪವಿತ್ರಾ ಗೌಡ ಸೇರಿದಂತೆ ಐದು ಆರೋಪಿಗಳನ್ನು ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಲಾಗಿದೆ. ಕ್ವಾರಂಟೈನ್ ಸೆಲ್ ನಲ್ಲಿರುವ ದರ್ಶನ್ ಆಘಾತಕ್ಕೊಳಗಾಗಿದ್ದಾರೆ. ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ ನಂತರ ದರ್ಶನ್ ಅವರನ್ನು ಪೊಲೀಸರು ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರ ಜೈಲಿಗೆ ಕಳುಹಿಸಿದ್ದಾರೆ.
ಜೈಲಿನಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳನ್ನು ಪ್ರತ್ಯೇಕ ಸೆಲ್ ನಲ್ಲಿ ಇರಿಸಲಾಗಿದೆ. ರಾತ್ರಿಯಿಡಿ ದರ್ಶನ್ ನಿದ್ದೆ ಮಾಡಿಲ್ಲ. ಇಂದು ಜೈಲಿನಲ್ಲಿ ಆರೋಪಿಗಳ ಆರೋಗ್ಯ ತಪಾಸಣೆ ನಡೆಸಲಾಗುವುದು ಎಂದು ಹೇಳಲಾಗಿದೆ.
ಇನ್ನು ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ಜಗದೀಶ್, ಅನುಕುಮಾರ್ ಅವರನ್ನು ಪೊಲೀಸರು ಚಿತ್ರದುರ್ಗದಲ್ಲಿ ಬಂಧಿಸಿ ಬೆಂಗಳೂರಿಗೆ ಕರೆತಂದಿದ್ದಾರೆ. ಇಬ್ಬರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಇರಿಸಲಾಗಿದ್ದು, ಬೆಳಗ್ಗೆ 11 ಗಂಟೆಗೆ ನ್ಯಾಯಾಧೀಶರ ಎದುರು ಹಾಜರುಪಡಿಸಲಾಗುವುದು.