ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ದಿ ಡೆವಿಲ್’ ಚಿತ್ರ ಇಂದು ರಾಜ್ಯದ 300ಕ್ಕೂ ಅಧಿಕ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ. ಎಲ್ಲಡೆ ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಬೆಳಗ್ಗೆ 6 ಗಂಟೆಯಿಂದಲೇ ವಿಶೇಷ ಪ್ರದರ್ಶನ ಶುರುವಾಗಿವೆ.
ಮೊದಲ ದಿನ 1,000ಕ್ಕೂ ಹೆಚ್ಚು ಪ್ರದರ್ಶನ ಕಾಣಲಿದ್ದು, ಟಿಕೆಟ್ ದರ ಗರಿಷ್ಠ 1200 ರೂಪಾಯಿವರೆಗೆ ಮಾರಾಟವಾಗಿದೆ. ಜೈಲಿನಿಂದಲೇ ಅಭಿಮಾನಿಗಳಿಗೆ ಪತ್ರ ಬರೆದ ದರ್ಶನ್ ಚಿತ್ರದ ಯಶಸ್ಸಿಗೆ ಮನವಿ ಮಾಡಿದ್ದಾರೆ.
‘ದಿ ಡೆವಿಲ್’ 250ಕ್ಕೂ ಹೆಚ್ಚು ಸಿಂಗಲ್ಸ್ ಸ್ಕ್ರೀನ್, 70 ಮಲ್ಟಿಪ್ಲೆಕ್ಸ್ ಗಳಲ್ಲಿ ಒಟ್ಟು 1,000ಕ್ಕೂ ಹೆಚ್ಚು ಪ್ರದರ್ಶನ ಕಾಣಲಿದೆ ಬೆಂಗಳೂರಿನ ಮಾಲ್ ಆಫ್ ಏಷ್ಯಾದಲ್ಲಿ ಸುಮಾರು 33 ಪ್ರದರ್ಶನ ನಿಗದಿಪಡಿಸಲಾಗಿದೆ. ನಾಲ್ಕು ದಿನಗಳ ಹಿಂದೆ ಬುಕಿಂಗ್ ಆರಂಭವಾಗಿ ಈಗಾಗಲೇ ಟಿಕೆಟ್ ಸೋಲ್ಡ್ ಔಟ್ ಆಗಿವೆ.
ಪ್ರಕಾಶ್ ವೀರ್ ಚಿತ್ರ ನಿರ್ದೇಶನ ಮಾಡಿದ್ದಾರೆ, ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬೆಳಗ್ಗೆಯಿಂದಲೇ ವಿಶೇಷ ಪ್ರದರ್ಶನ ಆರಂಭವಾಗಿದ್ದು, ಅಭಿಮಾನಿಗಳ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಥಿಯೇಟರ್ ಗಳ ಬಳಿ ಹಬ್ಬದ ವಾತಾವರಣ ಕಂಡುಬಂದಿದೆ.

